ಹಿರಿಯೂರು: ಕ್ರಿಕೆಟ್ ಬೆಟ್ಟಿಂಗ್ ನಲ್ಲಿ ತೊಡಗಿದ್ದ ಆರೋಪದ ಮೇರೆಗೆ ನಾಲ್ವರನ್ನು ಶನಿವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ.
ಜಗದೀಶ್, ಮಾರುತಿ, ಕಿರಣ್ ಹಾಗೂ ರವಿ ಬಂಧಿತರು. ಬಂಧಿತರಿಂದ ₹ 1 ಲಕ್ಷ ನಗದು ಹಾಗೂ ಹತ್ತು ಮೊಬೈಲ್ ಫೋನುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಶನಿವಾರ ರಾತ್ರಿ ಐಪಿಎಲ್ ಪಂದ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಆರೋಪಿಗಳು ಬೆಟ್ಟಿಂಗ್ ನಲ್ಲಿ ತೋಡಗಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಹಿರಿಯೂರು ಠಾಣೆಯ ಪೊಲೀಸರು ದಾಳಿ ನಡೆಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.