ಹೊಳಲ್ಕೆರೆ (ಚಿತ್ರದುರ್ಗ ಜಿಲ್ಲೆ): ‘ರಾಜ್ಯದ 23 ಲಕ್ಷ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಿಸಲು ತೀರ್ಮಾನಿಸಲಾಗಿದೆ’ ಎಂದು ಕೆಎಸ್‌ಆರ್‌ಟಿಸಿ ಅಧ್ಯಕ್ಷ ಎಂ.ಚಂದ್ರಪ್ಪ ಭರವಸೆ ನೀಡಿದರು.
ಪಟ್ಟಣದಲ್ಲಿ ಕಾರ್ಮಿಕ ಇಲಾಖೆ ಶನಿವಾರ ಆಯೋಜಿಸಿದ್ದ ಆಹಾರದ ಕಿಟ್ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಇನ್ನು 2, 3 ತಿಂಗಳಲ್ಲಿ ಬಸ್ ಪಾಸ್ ವಿತರಿಸಲಾಗುವುದು. ಕಟ್ಟಡ ಕಾರ್ಮಿಕರು ಬೇರೆ ಕಡೆ ಕೆಲಸಕ್ಕೆ ಹೋಗುವಾಗ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು’ ಎಂದು ಅವರು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.