ಮೊಳಕಾಲ್ಮುರು: ತಾಲ್ಲೂಕಿನ ಸಿದ್ದಯ್ಯನಕೋಟೆ ವಿಜಯ ಮಹಾಂತೇಶ್ವರ ಶಾಖಾಮಠದಲ್ಲಿ ನಡೆಯುತ್ತಿರುವ ಗಡಿನಾಡ ಉತ್ಸವದಲ್ಲಿ ಭಾನುವಾರ ಕಣ್ಣಿನ ಉಚಿತ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿತ್ತು.
ವಿಜಯಗನರ ಜಿಲ್ಲೆಯ ಕೂಡ್ಲಿಗಿ ಶಾಸಕ ಎನ್.ಟಿ.ಶ್ರೀನಿವಾಸ್ ಶಿಬಿರದ ನೇತೃತ್ವ ವಹಿಸಿದ್ದರು. ಶನಿವಾರ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಕಣ್ಣಿನ ತಪಾಸಣಾ ಶಿಬಿರದಲ್ಲಿ ಸ್ವತಃ ಕಣ್ಣಿನ ತಜ್ಞರಾಗಿರುವ ಶಾಸಕ ಎನ್.ಟಿ.ಶ್ರೀನಿವಾಸ್ ರೋಗಿಗಳ ತಪಾಸಣೆ ಮಾಡಿದರು. 700 ಕ್ಕೂ ಹೆಚ್ಚು ಮಂದಿ ಶಿಬಿರದಲ್ಲಿ ಭಾಗವಹಿಸಿದ್ದರು. ಅಗತ್ಯ ಇರುವವರಿಗೆ ಉಚಿತವಾಗಿ ಶಸ್ತ್ರಚಿಕಿತ್ಸೆ ಮಾಡಿಸಲಾಗುವುದು ಎಂದು ಶಿಬಿರದ ಆಯೋಜಕರು ತಿಳಿಸಿದ್ದಾರೆ.
ಶಾಸಕ ಎನ್.ವೈ.ಗೋಪಾಲಕೃಷ್ಣ, ಮಠದ ಬಸವಲಿಂಗ ಸ್ವಾಮೀಜಿ, ಕಾರ್ಯದರ್ಶಿ ಪಿ.ಆರ್. ಕಾಂತರಾಜ್, ಮುಖಂಡರಾದ ಕೆ.ಬಸಣ್ಣ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.