
ಪ್ರಜಾವಾಣಿ ವಾರ್ತೆ
ಚಿತ್ರದುರ್ಗ: ‘ಡಾ.ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದವರಿಗೆ ನೀಡಿರುವ ಸೌಲಭ್ಯಗಳನ್ನು ಹಿಂಪಡೆಯಲು ಕೇಂದ್ರ ಸರ್ಕಾರ ತಿದ್ದುಪಡಿ ತಂದರೆ ಬಿಜೆಪಿಗೆ ರಾಜೀನಾಮೆ ನೀಡುವ ದೇಶದ ಮೊದಲ ಶಾಸಕ ನಾನೇ’ ಎಂದು ಶಾಸಕ ಜಿ.ಎಚ್. ತಿಪ್ಪಾರೆಡ್ಡಿ ಹೇಳಿದರು.
ಬಂಜಾರ ಗುರುಪೀಠದಲ್ಲಿ ಭಾನುವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಪ್ರಧಾನಿ ಮೋದಿ ನೇತೃತ್ವದಕೇಂದ್ರ ಸರ್ಕಾರ 370 ಹಾಗೂ 35ಎ ಈ ಎರಡೂ ಕಲಂಗಳನ್ನು ರದ್ದುಗೊಳಿಸಿದ್ದು ದೇಶದ ಹಿತದೃಷ್ಟಿಯಿಂದ ಮಾತ್ರ. ಆದರೆ, ಕೆಲವರು ಸಂಪೂರ್ಣ ಸಂವಿಧಾನವನ್ನೇ ಬದಲಿಸಿದಂತೆ ಮಾತನಾಡುತ್ತಿರುವುದು ಸರಿಯಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.