ADVERTISEMENT

ಚಿತ್ರದುರ್ಗ: ಗ್ಯಾಸ್ ಟ್ಯಾಂಕರ್ ಹರಿದು ನಾಲ್ವರು ಸಾವು

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2021, 3:42 IST
Last Updated 4 ಡಿಸೆಂಬರ್ 2021, 3:42 IST
ಅಪಘಾತದ ದೃಶ್ಯ
ಅಪಘಾತದ ದೃಶ್ಯ   

ಚಿತ್ರದುರ್ಗ: ತಾಲ್ಲೂಕಿನ ದೊಡ್ಡಸಿದ್ದವ್ವನಹಳ್ಳಿ ಸಮೀಪದ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗ್ಯಾಸ್ ಟ್ಯಾಂಕರ್ ಹರಿದು ನಾಲ್ವರು ಮೃತಪಟ್ಟ ಧಾರುಣ ಘಟನೆ ಶನಿವಾರ ನಸುಕಿನಲ್ಲಿ ನಡೆದಿದೆ.

ರಾಯಚೂರಿನ ಹುಲುಗಪ್ಪ, ಕುಷ್ಟಗಿಯ ಮಂಜುನಾಥ, ವಿಜಯಪುರದ ಸಂಜಯ್, ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಲಾರಿ ಚಾಲಕ ಶರಣಪ್ಪ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಗದಗ ಜಿಲ್ಲೆಯ ರೋಣ ತಾಲ್ಲೂಕಿನಿಂದ ಬೆಂಗಳೂರಿಗೆ ಈರುಳ್ಳಿ ಸಾಗಣೆ ಮಾಡುತ್ತಿದ್ದ ಲಾರಿ ದೊಡ್ಡಸಿದ್ದವ್ವನಹಳ್ಳಿ ಸಮೀಪ ಪಂಚರ್ ಆಗಿದೆ. ಹೆದ್ದಾರಿ ಬದಿಯಲ್ಲಿ ಲಾರಿ ನಿಲುಗಡೆ ಮಾಡಿ ಪಂಚರ್ ಹಾಕುತ್ತಿದ್ದ ಸಂದರ್ಭದಲ್ಲಿ ವೇಗವಾಗಿ ಹಿಂಬದಿಯಿಂದ ಬಂದ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಅಪಘಾತ ಭೀಕರವಾಗಿ ನಡೆದಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈರುಳ್ಳಿ ರಸ್ತೆಯಲ್ಲಿ ಬಿದ್ದಿವೆ. ಲಾರಿ ಸಂಪೂರ್ಣ ನಜ್ಜುಗುಜ್ಜಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.