ADVERTISEMENT

ಕೈತಪ್ಪಿದ ಸಚಿವ ಸ್ಥಾನ: ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಬಹಿರಂಗ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 6 ಫೆಬ್ರುವರಿ 2020, 7:15 IST
Last Updated 6 ಫೆಬ್ರುವರಿ 2020, 7:15 IST
ಜಿ.ಎಚ್‌.ತಿಪ್ಪಾರೆಡ್ಡಿ
ಜಿ.ಎಚ್‌.ತಿಪ್ಪಾರೆಡ್ಡಿ   

ಚಿತ್ರದುರ್ಗ: ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ತಮ್ಮನ್ನು ಪರಿಗಣಿಸದೇ ಇರುವುದಕ್ಕೆ ಶಾಸಕ ಜಿ.ಎಚ್‌.ತಿಪ್ಪಾರೆಡ್ಡಿ ಬಹಿರಂಗವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆದರೆ, ಪಕ್ಷವಿರೋಧಿ ಚಟುವಟಿಕೆಯಲ್ಲಿ ತೊಡಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜ್ಯ ಸಚಿವ ಸಂಪುಟದಲ್ಲಿ ಬೆಂಗಳೂರು ಹಾಗೂ ಬೆಳಗಾವಿಗೆ ಅರ್ಧದಷ್ಟು ಪಾಲು ಸಿಕ್ಕಿದೆ. ಚಿತ್ರದುರ್ಗ ಸೇರಿ ಹಲವು ಜಿಲ್ಲೆಗಳನ್ನು ಕಡೆಗಣಿಸಲಾಗಿದೆ’ ಎಂದು ಬೇಸರ ಹೊರಹಾಕಿದ್ದಾರೆ.

‘ಉಪಚುನಾವಣೆಯಲ್ಲಿ ಗೆಲುವು ಸಾಧಿಸಿ ಸರ್ಕಾರ ಸುಭದ್ರಗೊಳಿಸಿದವರಿಗೆ ಮಂತ್ರಿ ಸ್ಥಾನ ನೀಡಿರುವುದು ಸ್ವಾಗತಾರ್ಹ. ನಾನು ಮಂತ್ರಿಯಾಗಬೇಕು ಎಂಬುದು ಚಿತ್ರದುರ್ಗದ ಜನರ ಬಯಕೆಯಾಗಿತ್ತು. ಇನ್ನೂ ಏಳೆಂಟು ಜನರಿಗೆ ಮಂತ್ರಿ ಸ್ಥಾನ ನೀಡಿದರೆ ಒಳಿತು’ ಎಂದು ಹೇಳಿದ್ದಾರೆ.

ADVERTISEMENT

‘ಸ್ಥಳೀಯ ಸಂಸ್ಥೆಯಿಂದ ಲೋಕಸಭಾ ಚುನಾವಣೆವರೆಗೆ ಎಲ್ಲ ಹಂತದಲ್ಲಿ ದುಡಿದಿದ್ದೇವೆ. ಬಿಜೆಪಿ ಗೆಲುವಿಗೆ ಶ್ರಮಿಸಿದ್ದೇವೆ. ಇನ್ನೆರಡು ತಿಂಗಳು ಸುಧಾರಿಸಿಕೊಳ್ಳುವಂತೆ ಮುಖ್ಯಮಂತ್ರಿ ಹೇಳಿದ್ದರು. ಮೂರ್ನಾಲ್ಕು ಬಾರಿ ಸಚಿವರಾದವರನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳುವುದು ಸೂಕ್ತ. ಹೊಸಬರು, ಹಿರಿಯರಿಗೆ ಅವಕಾಶ ನೀಡಿ’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.