ಚಿತ್ರದುರ್ಗ: ಚಿಕ್ಕಜಾಜೂರು ಸಮೀಪದ ಬಾಣಗೆರೆ ಗ್ರಾಮದಲ್ಲಿ ಶನಿವಾರ ನಸುಕಿನಲ್ಲಿ ಮನೆ ಗೋಡೆ ಕುಸಿದು ಬಾಲಕಿ ಮೃತಪಟ್ಟಿದ್ದಾಳೆ.
ರವಿಕುಮಾರ್ ಎಂಬುವರ ಪುತ್ರಿ ಅರ್ಪಿತಾ (13) ಮೃತ ಬಾಲಕಿ. ಘಟನೆಯಲ್ಲಿ ರವಿಕಯಮಾರ್ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ.
ರಾತ್ರಿ ಮಲಗಿದ್ದವರ ಮೇಲೆ ಗೋಡೆ ಕುಸಿದು ಬಿದ್ದಿದೆ. ಇಟ್ಟಿಗೆಗಳು ಬಿದ್ದು ಅರ್ಪಿತಾ ಮೃತಪಟ್ಟಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.