ADVERTISEMENT

ತೋಟಗಾರಿಕಾ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಚಿನ್ನದ ಪದಕ

​ಪ್ರಜಾವಾಣಿ ವಾರ್ತೆ
Published 14 ಮೇ 2025, 15:58 IST
Last Updated 14 ಮೇ 2025, 15:58 IST
ಕ್ರೀಡಾಕೂಟದಲ್ಲಿ ಬಂಗಾರದ ಪದಕ ಪಡೆದ ಆರ್.ಎಸ್. ದರ್ಶನ್, ಸಿ.ಅಭಿಷೇಕ್ 
ಕ್ರೀಡಾಕೂಟದಲ್ಲಿ ಬಂಗಾರದ ಪದಕ ಪಡೆದ ಆರ್.ಎಸ್. ದರ್ಶನ್, ಸಿ.ಅಭಿಷೇಕ್    

ಹಿರಿಯೂರು: ಉತ್ತರ ಪ್ರದೇಶದಲ್ಲಿರುವ ಅಯೋಧ್ಯ ಆಚಾರ್ಯ ನರೇಂದ್ರದೇವ ಕೃಷಿ ಮತ್ತು ತಾಂತ್ರಿಕ ವಿಶ್ವವಿದ್ಯಾಲಯದಲ್ಲಿ ಮೇ 2ರಿಂದ 5ರವರೆಗೆ ನಡೆದ 22ನೇ ಅಖಿಲ ಭಾರತ ಅಂತರ ಕೃಷಿ ವಿಶ್ವವಿದ್ಯಾಲಯಗಳ ಕ್ರೀಡಾಕೂಟದಲ್ಲಿ ತಾಲ್ಲೂಕಿನ ಬಬ್ಬೂರು ಸಮೀಪದ ತೋಟಗಾರಿಕಾ ಮಹಾವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದಿದ್ದಾರೆ.

ವೈಯಕ್ತಿಕ ವಿಭಾಗದಲ್ಲಿ ಆರ್.ಎಸ್. ದರ್ಶನ್ 400 ಮೀಟರ್ ಓಟ, ಸಿ.ಅಭಿಷೇಕ್ ಹಾಗೂ ಆರ್. ಎಸ್. ದರ್ಶನ್ 4x100 ಮೀ. ರಿಲೇಯಲ್ಲಿ ಬಂಗಾರದ ಪದಕ ಪಡೆದಿದ್ದಾರೆ.

ಪದಕ ವಿಜೇತ ವಿದ್ಯಾರ್ಥಿಗಳಿಗೆ ಹಾಗೂ ತರಬೇತುದಾರ ವಿಶ್ವನಾಥ್ ಅವರನ್ನು ಮುಖ್ಯಸ್ಥರು ಅಭಿನಂದಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.