ADVERTISEMENT

ಸಿದ್ದರಾಮಯ್ಯಗೆ ಬೆಂಬಲ ಸೂಚಿಸಿರುವ ಗೂಳಿಹಟ್ಟಿ ಶೇಖರ್ ಆಡಿಯೊ ಹರಿದಾಟ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2024, 13:50 IST
Last Updated 4 ಸೆಪ್ಟೆಂಬರ್ 2024, 13:50 IST
ಗೂಳಿಹಟ್ಟಿ ಡಿ ಶೇಖರ್
ಗೂಳಿಹಟ್ಟಿ ಡಿ ಶೇಖರ್   

ಹೊಸದುರ್ಗ: ಮಾಜಿ ಸಚಿವ ಗೂಳಿಹಟ್ಟಿ ಶೇಖರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬೆಂಬಲ ಸೂಚಿಸಿರುವ ಆಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಾತೀತ ನಾಯಕ. ಎಲ್ಲ ಸಮುದಾಯಗಳನ್ನು ಅವರು ಸಮಾನವಾಗಿ ಕಾಣುತ್ತಾರೆ. ಒಂದೂ ಕಪ್ಪುಚುಕ್ಕೆ ಇಲ್ಲದಂತೆ ರಾಜಕೀಯ ಜೀವನದಲ್ಲಿ ಮುಂದುವರಿಯುತ್ತಿದ್ದಾರೆ. ಹಾಗಾಗಿ ಅವರ ಪರ ನಿಲ್ಲುತ್ತೇನೆ’ ಎಂದಿದ್ದಾರೆ. 

‘2008ರಲ್ಲಿ ಪಕ್ಷೇತರರ ವಿರುದ್ಧವಾಗಿ ಹೈಕೋರ್ಟ್ ತೀರ್ಪು ನೀಡಿತ್ತು. ಆದರೆ ಸುಪ್ರೀಂ ಕೋರ್ಟ್ ಪರವಾಗಿ ತೀರ್ಪು ನೀಡಿತ್ತು. ಈಗ ಹೈಕೋರ್ಟ್ ತೀರ್ಪು ಸಿದ್ದರಾಮಯ್ಯ ಅವರ ಪರವಾಗಿ ಬರುವುದು ಸಂದೇಹ. ಒಂದು ವೇಳೆ ಬಂದರೂ ಸ್ವಾಗತ. ಒಂದು ವೇಳೆ, ಸಿದ್ದರಾಮಯ್ಯ ಅವರ ವಿರುದ್ಧವಾಗಿ ತೀರ್ಪು ಬಂದರೆ, ವಿಪಕ್ಷಗಳ ಒತ್ತಡಕ್ಕೆ ಮಣಿದು ಅವರು ರಾಜೀನಾಮೆ ನೀಡಬಾರದು. ಸುಪ್ರೀಂಕೋರ್ಟ್ ತೀರ್ಪು ಬರುವವರೆಗೂ ಅಧಿಕಾರದಲ್ಲಿ ಮುಂದುವರಿಯಬೇಕು’ ಎಂದು ಗೂಳಿಹಟ್ಟಿ ಆಡಿಯೊದಲ್ಲಿ ಹೇಳಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.