ಹೊಳಲ್ಕೆರೆ: ‘ಪಟ್ಟಣದ ಸಂವಿಧಾನ ಸೌಧದಲ್ಲಿ ಆ.30 ರಂದು ಸರ್ಕಾರಿ ನೌಕರರ ಸಮ್ಮೇಳನ ಹಾಗೂ ಸರ್ವ ಸದಸ್ಯರ ಸಾಮಾನ್ಯ ಸಭೆ ನಡೆಯಲಿದೆ’ ಎಂದು ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ತಿಪ್ಪೇಶಪ್ಪ ತಿಳಿಸಿದರು.
‘ಸಿರಿಗೆರೆಯ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಲಿದ್ದು, ಶಾಸಕ ಎಂ.ಚಂದ್ರಪ್ಪ ಕಾರ್ಯಕ್ರಮ ಉದ್ಘಾಟಿಸುವರು. ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಸಿ.ಎಸ್.ಷಡಕ್ಷರಿ, ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆಕಾಶ್, ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಟಿ.ಕುಮಾರ ಸ್ವಾಮಿ ಭಾಗವಹಿಸುವರು’ ಎಂದು ಗುರುವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾಹಿತಿ ನೀಡಿದರು.
‘ಸರ್ಕಾರಿ ನೌಕರರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎಚ್.ಗಿರಿಗೌಡ, ಗೌರವಾಧ್ಯಕ್ಷ ಎಸ್.ಬಸವರಾಜು, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಬಿ.ಬಳ್ಳಾರಿ, ಆರ್.ಮೋಹನ ಕುಮಾರ್, ಜಿಲ್ಲಾ ಘಟಕದ ಅಧ್ಯಕ್ಷ ನೆಲ್ಕುದ್ರಿ ಸದಾನಂದ, ಬಿ.ಸಿದ್ದಬಸಪ್ಪ, ಎಂ.ಎ.ನಾಗನ ಗೌಡ, ಡಿಡಿಪಿಐ ಎಂ.ಆರ್.ಮಂಜುನಾಥ್, ಕೆ.ತಿಮ್ಮಯ್ಯ, ತಹಶೀಲ್ದಾರ್ ವಿಜಯ ಕುಮಾರ, ವಿಶ್ವನಾಥ್, ಬಿಇಒ ಶ್ರೀನಿವಾಸ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು, ಜಿಲ್ಲಾ ಘಟಕದ ಪದಾಧಿಕಾರಿಗಳು, ನಿರ್ದೇಶಕರು, ತಾಲ್ಲೂಕಿನ ಸರ್ಕಾರಿ ನೌಕರರು ಭಾಗವಹಿಸುವರು’ ಎಂದು ಹೇಳಿದರು.
‘ಉತ್ತಮ ನೌಕರರಿಗೆ ಸೇವಾ ಪ್ರಶಸ್ತಿ ವಿತರಣೆ, ವೃತ್ತಿಪರ ಮಾರ್ಗದರ್ಶನ ಕಾರ್ಯಾಗಾರ, ರಾಜ್ಯ ಘಟಕದ ಅಧ್ಯಕ್ಷರಿಗೆ ಅಭಿನಂದನಾ ಕಾರ್ಯಕ್ರಮ ನಡೆಯಲಿದೆ’ ಎಂದರು.
ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಲೋಕೇಶ್, ರಾಜ್ಯ ಪರಿಷತ್ ಸದಸ್ಯ ಎಚ್.ಎನ್.ಸಿದ್ದರಾಮಪ್ಪ, ಕಾರ್ಯದರ್ಶಿ ಕೆ.ಎಸ್.ನಿಜಲಿಂಗಪ್ಪ, ಎಚ್. ಆನಂದ್, ಎಸ್.ಎನ್.ಗುರುಪ್ರಸಾದ್, ಚಂದ್ರಶೇಖರ ನಾಯ್ಕ, ಪಿ.ಶಿವಕುಮಾರ್, ಎಂ.ಕೆ.ರಂಗನಾಥ್, ಜಾನ್ ಮೋಹನ್ ರಾಜ್, ಎನ್.ಸಿ.ಶ್ರೀಧರ್, ನಾರಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.