ADVERTISEMENT

ಸರ್ಕಾರಿ ಶಾಲೆಗಳ ಸಬಲತೆಗೆ ಕೈಜೋಡಿಸಿ: ನಾಗವೇಣಿ ರವಿಶಂಕರ್‌

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 7:34 IST
Last Updated 17 ಜನವರಿ 2026, 7:34 IST
ಮೊಳಕಾಲ್ಮುರು ತಾಲ್ಲೂಕಿನ ರಾಂಪುರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕ್ಲಸ್ಟರ್‌ ಮಟ್ಟದ ಕಲಿಕಾ ಹಬ್ಬವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗವೇಣಿ ಉದ್ಘಾಟಿಸಿದರು 
ಮೊಳಕಾಲ್ಮುರು ತಾಲ್ಲೂಕಿನ ರಾಂಪುರದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕ್ಲಸ್ಟರ್‌ ಮಟ್ಟದ ಕಲಿಕಾ ಹಬ್ಬವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗವೇಣಿ ಉದ್ಘಾಟಿಸಿದರು    

ಮೊಳಕಾಲ್ಮುರು: ‘ಸರ್ಕಾರವು ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ಹಾಕಿಕೊಂಡಿದ್ದು, ಪಾಲಕರು ಮತ್ತು ಶಿಕ್ಷಕರು ಕೈ ಜೋಡಿಸುವ ಮೂಲಕ ಉದ್ದೇಶ ಸಾಕಾರಕ್ಕೆ ಸಹಕಾರ ನೀಡಬೇಕು’ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಾಗವೇಣಿ ರವಿಶಂಕರ್‌ ಹೇಳಿದರು.

ತಾಲ್ಲೂಕಿನ ರಾಂಪುರದ ಗಡ್ಡೆ ವೀರಭದ್ರಪ್ಪ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶುಕ್ರವಾರ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಂಪುರ ಕ್ಲಸ್ಟರ್‌ ಮಟ್ಟದ ಕಲಿಕಾ ಹಬ್ಬ ಉದ್ಘಾಟಿಸಿ ಅವರು ಮಾತನಾಡಿದರು.

‘ಪರಿಪೂರ್ಣ ಶಿಕ್ಷಣ ಪಡೆಯಲು ಪಠ್ಯದ ಜತೆ ಪಠ್ಯೇತರ ಚಟುವಟಿಗಳು ಮಕ್ಕಳಿಗೆ ಅಗತ್ಯ. ಇದಕ್ಕಾಗಿ ಪ್ರತಿಭಾ ಕಾರಂಜಿ, ಕಲಿಕಾ ಹಬ್ಬದಂತಹ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು, ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದರು.

ADVERTISEMENT

ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಜಿ.ಬಿ. ಮಮತಾ, ಸಿಆರ್‌ಪಿ ಎ.ಎಲ್.‌ ಮೌನೇಶ್‌ ಮಾತನಾಡಿದರು. ಮುಖ್ಯಶಿಕ್ಷಕ ಹನುಮಂತರಾಯ, ಶಿಕ್ಷಕ ಎಚ್.ಎಂ. ಸತೀಶ್‌, ಪಿಡಿಒ ಗುಂಡಪ್ಪ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.