ADVERTISEMENT

ಪುಸ್ತಕ ಖರೀದಿಗೆ ₹ 134 ಕೋಟಿ

ರಘು ಆಚಾರ್ ಪ್ರಶ್ನೆಗೆ ಸುರೇಶ್ ಕುಮಾರ್ ಪ್ರತಿಕ್ರಿಯೆ

​ಪ್ರಜಾವಾಣಿ ವಾರ್ತೆ
Published 22 ಸೆಪ್ಟೆಂಬರ್ 2020, 15:18 IST
Last Updated 22 ಸೆಪ್ಟೆಂಬರ್ 2020, 15:18 IST
ರಘು ಆಚಾರ್
ರಘು ಆಚಾರ್   

ಚಿತ್ರದುರ್ಗ: ಮೂರು ವರ್ಷಗಳಲ್ಲಿ ಗ್ರಂಥಾಲಯಗಳ ಪುಸ್ತಕ ಖರೀದಿಗೆ ₹ 134 ಕೋಟಿ ವೆಚ್ಚ ಮಾಡಲಾಗಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್‌ ತಿಳಿಸಿದ್ದಾರೆ.

ವಿಧಾನಪರಿಷತ್‌ ಸದಸ್ಯ ಜಿ.ರಘು ಆಚಾರ್ ಅವರ ಪ್ರಶ್ನೆಗೆ ಸಚಿವರು ಲಿಖಿತ ಉತ್ತರ ನೀಡಿದ್ದಾರೆ.

‘ರಾಜ್ಯದಲ್ಲಿ 1,075 ಗ್ರಂಥಾಲಯಗಳಿವೆ. ನಗರ ಕೇಂದ್ರ ಗ್ರಂಥಾಲಯಗಳಿಗೆ ₹ 52 ಕೋಟಿ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯಗಳಿಗೆ ₹ 81 ಕೋಟಿ ಅನುದಾನ ಒದಗಿಸಲಾಗಿದೆ. 2020-21ನೇ ಸಾಲಿನ ಆಯವ್ಯಯದಲ್ಲಿ ಪುಸ್ತಕ ಖರೀದಿಗೆ ₹ 7 ಕೋಟಿ ಅನುದಾನ ಮೀಸಲಿಡಲಾಗಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ಕಿರು ಮೃಗಾಲಯ ಅಭಿವೃದ್ಧಿ:ಆಡುಮಲ್ಲೇಶ್ವರ ಕಿರು ಮೃಗಾಲಯದ ಸರ್ವಾಂಗೀಣ ಅಭಿವೃದ್ಧಿಗೆ ಸರ್ಕಾರ ಶ್ರಮಿಸುತ್ತಿದೆ ಎಂದು ಅರಣ್ಯ ಸಚಿವ ಆನಂದ್ ಸಿಂಗ್‌ ತಿಳಿಸಿದ್ದಾರೆ.

ವಿಧಾನಪರಿಷತ್‌ ಸದಸ್ಯ ಜಿ.ರಘು ಆಚಾರ್ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಸಚಿವರು, ‘ಕಿರು ಮೃಗಾಲಯವು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಆಡಳಿತ ವ್ಯಾಪ್ತಿಯಲ್ಲಿದೆ. ಚಿರತೆ, ಕರಡಿ, ಜೀಬ್ರಾ, ಜಿಂಕೆ, ಕೃಷ್ಣಮೃಗಗಳಿಗೆ ಪ್ರತ್ಯೇಕ ಆವರಣ ನಿರ್ಮಿಸಲಾಗಿದೆ. ಆಸ್ಪತ್ರೆ ಹಾಗೂ ಅಡುಗೆ ಮನೆ ನಿರ್ಮಾಣ ಕಾಮಗಾರಿ ನಡೆಯುತ್ತಿದೆ’ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.