ADVERTISEMENT

ಚಿತ್ರದುರ್ಗ ಜಿಲ್ಲೆಯ 100 ಗ್ರಾಮ ಪಂಚಾಯಿತಿಗಳಿಗೆ ಬಿರುಸಿನ ಮತದಾನ

​ಪ್ರಜಾವಾಣಿ ವಾರ್ತೆ
Published 22 ಡಿಸೆಂಬರ್ 2020, 2:58 IST
Last Updated 22 ಡಿಸೆಂಬರ್ 2020, 2:58 IST
   

ಚಿತ್ರದುರ್ಗ: ಜಿಲ್ಲೆಯ ಮೂರು ತಾಲ್ಲೂಕು ವ್ಯಾಪ್ತಿಯ 100 ಗ್ರಾಮ ಪಂಚಾಯಿತಿಯ 1,558 ಸ್ಥಾನಗಳಿಗೆ ಮೊದಲ ಹಂತದಲ್ಲಿ ಮತದಾನ ನಡೆಯುತ್ತಿದೆ.

ಚಿತ್ರದುರ್ಗ, ಹೊಸದುರ್ಗ ಹಾಗೂ ಹೊಳಲ್ಕೆರೆ ತಾಲ್ಲೂಕಿನಲ್ಲಿ 810 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 4,522 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ನಿಗದಿಯಂತೆ ಬೆಳಿಗ್ಗೆ 7ಕ್ಕೆ ಮತದಾನ ಆರಂಭವಾಗಿದೆ. ಚಿತ್ರದುರ್ಗ ತಾಲ್ಲೂಕಿನ ಮಠದ ಕುರುಬರಹಟ್ಟಿ ಗ್ರಾಮ ಪಂಚಾಯಿತಿಯಲ್ಲಿ ಬಿರುಸಿನ ಮತದಾನ ನಡೆಯುತ್ತಿದೆ. ಮೈ ಕೊರೆಯುವ ಚಳಿಯಲ್ಲೂ ಮತದಾರರು ಸಾಲಾಗಿ ನಿಂತಿದ್ದಾರೆ.

ADVERTISEMENT

ಅಂತರ ಕಾಯ್ದುಕೊಳ್ಳಲು ಬಾಕ್ಸ್ ಮಾರ್ಕಿಂಗ್ ಮಾಡಲಾಗಿದೆ. ಪ್ರತಿಯೊಬ್ಬರಿಗೂ ಸ್ಯಾನಿಟೈಸರ್ ಹಾಕಿ ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.