ADVERTISEMENT

ಮೊಳಕಾಲ್ಮುರು: ₹3.45 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿಪೂಜೆ

​ಪ್ರಜಾವಾಣಿ ವಾರ್ತೆ
Published 31 ಮೇ 2025, 12:46 IST
Last Updated 31 ಮೇ 2025, 12:46 IST
ಮೊಳಕಾಲ್ಮುರು ತಾಲ್ಲೂಕಿನ ದಡಗೂರಿನಲ್ಲಿ ಶನಿವಾರ ನೂತನ ರಸ್ತೆ ಕಾಮಗಾರಿಗೆ ಶಾಸಕ ಎನ್.ವೈ. ಗೋಪಾಲಕೃಷ್ಣ ಭೂಮಿಪೂಜೆ ನೆರವೇರಿಸಿದರು
ಮೊಳಕಾಲ್ಮುರು ತಾಲ್ಲೂಕಿನ ದಡಗೂರಿನಲ್ಲಿ ಶನಿವಾರ ನೂತನ ರಸ್ತೆ ಕಾಮಗಾರಿಗೆ ಶಾಸಕ ಎನ್.ವೈ. ಗೋಪಾಲಕೃಷ್ಣ ಭೂಮಿಪೂಜೆ ನೆರವೇರಿಸಿದರು   

ಮೊಳಕಾಲ್ಮುರು: ತಾಲ್ಲೂಕಿನ ದೇವಸಮುದ್ರ ಹೋಬಳಿಯ ವಿವಿಧೆಡೆ ಶನಿವಾರ ₹3.45 ಕೋಟಿ ವೆಚ್ಚದ ಕಾಮಗಾರಿಗಳಿಗೆ ಶಾಸಕ ಎನ್‌.ವೈ. ಗೋಪಾಲಕೃಷ್ಣ ಭೂಮಿಪೂಜೆ ನೆರವೇರಿಸಿದರು.

₹1 ಕೋಟಿ ವೆಚ್ಚದ ರಾಷ್ಟ್ರೀಯ ಹೆದ್ದಾರಿ 150 ಎ ನಿಂದ ಗೌರಸಮುದ್ರ ಸಂಪರ್ಕ ರಸ್ತೆ ಅಭಿವೃದ್ಧಿ ಕಾಮಗಾರಿ, ದಡಗೂರಿನಲ್ಲಿ ಹೊಸಹಳ್ಳಿ ಸಂಪರ್ಕ ರಸ್ತೆಯಲ್ಲಿ ₹30 ಲಕ್ಷ ವೆಚ್ಚದ ಸಿಡಿ ನಿರ್ಮಾಣ, ₹1 ಕೋಟಿ ವೆಚ್ಚದಲ್ಲಿ ದಡಗೂರು- ಹೊಸಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ, ರಾಷ್ಟ್ರೀಯ ಹೆದ್ದಾರಿ 150 ಎ ನಿಂದ ಎನ್.ಆರ್.ಕೆ. ಪುರ, ಪಕ್ಕುರ್ತಿ, ಮಲ್ಲೇಹರವು ಸಂಪರ್ಕ ರಸ್ತೆ ಕಾಮಗಾರಿ, ಪಕ್ಕುರ್ತಿ ಗ್ರಾಮದಲ್ಲಿ ₹15 ಲಕ್ಷ ವೆಚ್ಚದಲ್ಲಿ ಕೈಗೊಳ್ಳಲಿರುವ ಚರಂಡಿ ಹಾಗೂ ರಸ್ತೆ ಕಾಮಗಾರಿಗೆ ಶಾಸಕರು ಭೂಮಿಪೂಜೆ ಮಾಡಿದರು.

ತಾಲ್ಲೂಕು ಪಂಚಾಯಿತಿ ಇಒ ಎಚ್.‌ ಹನುಮಂತಪ್ಪ, ಲೋಕೋಪಯೋಗಿ ಇಲಾಖೆ ಎಇಇ ಲಕ್ಷ್ಮೀನಾರಾಯಣ್‌, ಜಿಲ್ಲಾ ಪಂಚಾಯಿತಿ ಎಇಇ ಲಿಂಗರಾಜ್‌, ಗ್ರಾಮಪಂಚಾಯಿತಿ ಅಧ್ಯಕ್ಷ ಹೂಲಯ್ಯ, ಪಿಡಿಒ ಗುಂಡಪ್ಪ, ಗುತ್ತಿಗೆದಾರರಾದ ನಾಗಸಮುದ್ರ ಗೋವಿಂದಪ್ಪ, ಎಸ್.‌ ಖಾದರ್‌, ಭರತ್‌ ಕುಮಾರ್‌, ಮುಖಂಡರಾದ ದಡಗೂರು ಮಂಜುನಾಥ್ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.