ADVERTISEMENT

ಡಿಸಿಸಿ ಬ್ಯಾಂಕ್ ವಿಲೀನಕ್ಕೆ ಸ್ಪಷ್ಟ ವಿರೋಧವಿದೆ: ಜಿ.ಟಿ.ದೇವೇಗೌಡ

​ಪ್ರಜಾವಾಣಿ ವಾರ್ತೆ
Published 30 ಮಾರ್ಚ್ 2022, 8:10 IST
Last Updated 30 ಮಾರ್ಚ್ 2022, 8:10 IST
ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ.ದೇವೇಗೌಡ
ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ.ದೇವೇಗೌಡ   

ಚಿತ್ರದುರ್ಗ: ಕೇರಳ ಮಾದರಿಯಲ್ಲಿ ರಾಜ್ಯದಲ್ಲಿಯೂ ಜಿಲ್ಲಾ ಕೇಂದ್ರ ಸಹಕಾರ (ಡಿಸಿಸಿ) ಬ್ಯಾಂಕ್‌ಗಳ ವಿಲೀನ ಮಾಡುವುದಕ್ಕೆ ಸ್ಪಷ್ಟ ವಿರೋಧವಿದೆ. ಇಂತಹ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಬಾರದು. ರಾಜ್ಯಕ್ಕೆ ಆಗಮಿಸುತ್ತಿರುವ ಅಮಿಶ್ ಶಾ ಅವರನ್ನು ಭೇಟಿ ಮಾಡಿ ಚರ್ಚಿಸಲಾಗುವುದು ಎಂದು ಕರ್ನಾಟಕ ಸಹಕಾರ ಮಹಾಮಂಡಲದ ಅಧ್ಯಕ್ಷ ಜಿ.ಟಿ.ದೇವೇಗೌಡ ತಿಳಿಸಿದರು.

ಬುಧವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇರಳ ಹಾಗೂ ಕರ್ನಾಟಕದ ಪರಿಸ್ಥಿತಿ ಭಿನ್ನ. ಕೇಂದ್ರ ಸರ್ಕಾರ ರಾಜ್ಯದಲ್ಲಿ ಜಿಲ್ಲಾ ಸಹಕಾರ ಬ್ಯಾಂಕ್ ಮುಚ್ಚಿದರೆ ರೈತರಿಗೆ ನಷ್ಟವಾಗುತ್ತದೆ. ಈ ಕ್ಷೇತ್ರವನ್ನು ಅಧ್ಯಯನ ಮಾಡಿ ಇನ್ನಷ್ಟು ಬಲಪಡಿಸುವ ಅಗತ್ಯವಿದೆ ಎಂದರು.

'1975ರಲ್ಲಿ ವಾಣಿಜ್ಯ ಬ್ಯಾಂಕುಗಳು ಗ್ರಾಮೀಣ ಪ್ರದೇಶದಲ್ಲಿ ಶಾಖೆ ತೆರೆದವು. ಆದರೆ ಜನರಿಗೆ ಸಾಲ ಸೌಲಭ್ಯ ಕಲ್ಪಿಸಲು ಸಾಧ್ಯವಾಗಲಿಲ್ಲ. ಈ ಕೆಲಸವನ್ನು ಸಹಕಾರ ಬ್ಯಾಂಕ್ ಮಾಡಿದೆ. ಗ್ರಾಮೀಣ ಭಾಗದಲ್ಲಿ ಸೊಸೈಟಿಗಳು, ಬ್ಯಾಂಕ್, ಸಿಬ್ಬಂದಿ ರೈತರನ್ನು ಭೇಟಿ ಮಾಡಿ ಯಶಸ್ವಿಯಾಗಿವೆ ಎಂದು ಹೇಳಿದರು.

ADVERTISEMENT

ಇತ್ತೀಚೆಗೆ ಸಹಕಾರ ಬ್ಯಾಂಕ್ ಗಳಲ್ಲಿ ಆರ್ ಬಿ ಐ ಹಸ್ತಕ್ಷೇಪ ಹೆಚ್ಚಾಗಿದೆ. ಸಾಲ ಸೌಲಭ್ಯ, ಠೇವಣಿ ಇಡುವುದಕ್ಕೆ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಕೇಂದ್ರ ಸರ್ಕಾರವೂ ಈ ಬಗ್ಗೆ ಆಲೋಚನೆ ಮಾಡಬೇಕಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.