ADVERTISEMENT

ಧರ್ಮಪುರ: ಅತಿಥಿ ಉಪನ್ಯಾಸಕರ ನೇಮಕಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 12 ಆಗಸ್ಟ್ 2025, 7:56 IST
Last Updated 12 ಆಗಸ್ಟ್ 2025, 7:56 IST
<div class="paragraphs"><p>ಪ್ರಾತಿನಿಧಿಕ ಪತ್ರ</p></div>

ಪ್ರಾತಿನಿಧಿಕ ಪತ್ರ

   

ಧರ್ಮಪುರ: ಸಮೀಪದ ದೇವರಕೊಟ್ಟ ಮೊರಾರ್ಜಿ ದೇಸಾಯಿ ಹಿಂದುಳಿದ ವರ್ಗ ವಸತಿ ಶಾಲೆಯಲ್ಲಿ 2025–26ನೇ ಸಾಲಿಗೆ ಪದವಿಪೂರ್ವ ಕಾಲೇಜು ಮಂಜೂರಾಗಿದ್ದು, ಖಾಲಿ ಇರುವ 6 ವಿಷಯಗಳಾದ ಕನ್ನಡಭಾಷಾ, ಆಂಗ್ಲಭಾಷಾ, ಭೌತಶಾಸ್ತ್ರ, ರಸಾಯನಶಾಸ್ತ್ರ, ಜೀವಶಾಸ್ತ್ರ ಮತ್ತು ಗಣಿತ ವಿಷಯಗಳಿಗೆ ಗೌರವಧನ (₹18,150) ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಬಿ.ಇಡಿ ಪದವಿ ಪಡೆದಿರಬೇಕು. ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ದಿನಾಂಕ ಡಿ. 15ರ ಒಳಗಾಗಿ ಎನ್. ಗುರುಸ್ವಾಮಿ, ಪ್ರಾಂಶುಪಾಲರು ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಪಿಯು ಕಾಲೇಜು, ಹಿರಿಯೂರು ತಾಲ್ಲೂಕು, ಚಿತ್ರದುರ್ಗ ಜಿಲ್ಲೆ ಇಲ್ಲಿಗೆ ಸಲ್ಲಿಸಲು ಸೂಚಿಸಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಲು: 7899883260

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.