ADVERTISEMENT

ಹ್ಯಾಂಡ್‌ಬಾಲ್‌ ಸ್ಪರ್ಧೆ: ಸುನೀತಾ ಉತ್ತಮ ಸಾಧನೆ

​ಪ್ರಜಾವಾಣಿ ವಾರ್ತೆ
Published 16 ಜೂನ್ 2025, 13:48 IST
Last Updated 16 ಜೂನ್ 2025, 13:48 IST
ಹ್ಯಾಂಡ್‌ಬಾಲ್‌ ಸ್ಪರ್ಧೆಯಲ್ಲಿ ಸಾಧನೆ ಮಾಡಿರುವ ಸುನೀತಾ ಟ್ರೋಫಿಯೊಂದಿಗೆ
ಹ್ಯಾಂಡ್‌ಬಾಲ್‌ ಸ್ಪರ್ಧೆಯಲ್ಲಿ ಸಾಧನೆ ಮಾಡಿರುವ ಸುನೀತಾ ಟ್ರೋಫಿಯೊಂದಿಗೆ   

ಮೊಳಕಾಲ್ಮುರು: ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಈಚೆಗೆ ನಡೆದ ಕಿರಿಯ ಬಾಲಕಿಯರ ರಾಷ್ಟ್ರಮಟ್ಟದ ಹ್ಯಾಂಡ್‌ಬಾಲ್‌ ಸ್ಪರ್ಧೆಯಲ್ಲಿ ತಾಲ್ಲೂಕಿನ ಯರೇನಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆ ವಿದ್ಯಾರ್ಥಿನಿ ಡಿ.ಎಂ. ಸುನೀತಾ ಉತ್ತಮ ಸಾಧನೆ ತೋರಿದ್ದಾರೆ.

ಸುನೀತಾ ರಾಜ್ಯದ ಬಾಲಕಿಯರ ತಂಡವನ್ನು ಪ್ರತಿನಿಧಿಸಿದ್ದು, ಸ್ಪರ್ಧೆಯಲ್ಲಿ ರಾಜ್ಯದ ತಂಡವು ಫೈನಲ್‌ ಪಂದ್ಯದಲ್ಲಿ ಗುಜರಾತ್‌ ತಂಡದ ವಿರುದ್ಧ ಪರಾಭವಗೊಂಡು ದ್ವಿತೀಯ ಸ್ಥಾನ ಪಡೆದು ಸಾಧನೆ ಮಾಡಿದೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.

ಪ್ರಾಂಶುಪಾಲ ಶಿವರಾಜ್‌, ತರಬೇತುದಾರ ಸಂಪತ್‌ ಮತ್ತು ಶಿಕ್ಷಕರು ಅಭಿನಂದಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.