ADVERTISEMENT

ಮಕ್ಕಳ ಆರೋಗ್ಯ ರಕ್ಷಣೆ ಮುಖ್ಯ: ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್

​ಪ್ರಜಾವಾಣಿ ವಾರ್ತೆ
Published 12 ನವೆಂಬರ್ 2023, 15:39 IST
Last Updated 12 ನವೆಂಬರ್ 2023, 15:39 IST
ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಿದರು
ಧರ್ಮಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟಿಸಿದರು   

ಧರ್ಮಪುರ: ಪ್ರತಿಯೊಬ್ಬರೂ ತಮ್ಮ ಮಕ್ಕಳ ಆರೋಗ್ಯ ರಕ್ಷಣೆಗೆ ಮುಂದಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.

ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಬೆಂಗಳೂರು ಸ್ಪರ್ಶ್ ಆಸ್ಪತ್ರೆ ಸಹಯೋಗದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮಕ್ಕಳ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ಪರ್ಶ್ ಆಸ್ಪತ್ರೆಯಿಂದ ರೋಗಿಗಳಿಗೆ ಉಚಿತವಾಗಿ ಪ್ಲಾಸ್ಟಿಕ್ ಸರ್ಜರಿ, ಮೂಳೆ ಚಿಕಿತ್ಸೆ, ಹೃದಯ ಶಸ್ತ್ರಚಿಕಿತ್ಸೆ, ಸಾಮಾನ್ಯ ಶಸ್ತ್ರಚಿಕಿತ್ಸೆ, ಕಿವಿ, ಮೂಗು ಮತ್ತು ಗಂಟಲು ಶಸ್ತ್ರಚಿಕಿತ್ಸೆ ಸೌಲಭ್ಯಗಳು ದೊರೆಯಲಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ADVERTISEMENT

ಒಟ್ಟು 556 ಮಕ್ಕಳ ಆರೋಗ್ಯ ತಪಾಸಣೆ ನಡೆಸಲಾಯಿತು. ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ವೆಂಕಟೇಶ್, ಡಾ.ಸಿ.ಹನುಮಂತರಾಯ, ಡಾ.ಕೆ.ಅನಿತಾ, ಡಾ.ಚಂದ್ರಮೌಳಿ, ಡಾ.ಕಿರಣ್, ಡಾ.ಸೀಮಾ, ಡಾ.ಪ್ರಣವ್, ಡಾ.ವರುಣ್, ಡಾ.ನಾಗಶೃತಿ, ಡಾ.ಸೌರಭ್‌, ಡಾ.ಮ್ರಿದುಲ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಹನುಮಂತರಾಯ, ಉಪಾಧ್ಯಕ್ಷೆ ಲಕ್ಷ್ಮಿದೇವಿ ನರಸಿಂಹಮೂರ್ತಿ, ಆಸ್ಪತ್ರೆ ಸಿಬ್ಬಂದಿ, ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.