ಚಿತ್ರದುರ್ಗ: ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಬಂಧಿತರಾಗಿರುವ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರನ್ನು ಹೃದಯ ಸಂಬಂಧಿ ಕಾಯಿಲೆ ತಪಾಸಣೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲು ಜಿಲ್ಲಾ ನ್ಯಾಯಾಲಯ ಅನುಮತಿ ನೀಡಿದೆ.
ಜಿಲ್ಲಾ ಕಾರಾಗೃಹದ ಅಧೀಕ್ಷಕಿ ಮಹಾದೇವಿ ಎಂ.ಮರಕಟ್ಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ಕಾಯ್ದಿರಿಸಿದ್ದ ಆದೇಶವನ್ನು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಬಿ.ಕೆ.ಕೋಮಲಾ ಸೋಮವಾರ ಪ್ರಕಟಿಸಿದರು. ಆರೋಪಿ ಯನ್ನು ಮಂಗಳವಾರ ಶಿವಮೊಗ್ಗಕ್ಕೆ ಸ್ಥಳಾಂತರಿಸುವ ಸಾಧ್ಯತೆ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.