ADVERTISEMENT

ಚಿತ್ರದುರ್ಗ | ಬಿರುಗಾಳಿ ಸಹಿತ ಭಾರಿ ಮಳೆ, ಹಿರಿಯೂರಿನಲ್ಲಿ ಮನೆಗೆ ನುಗ್ಗಿದ ನೀರು

​ಪ್ರಜಾವಾಣಿ ವಾರ್ತೆ
Published 6 ಜೂನ್ 2022, 7:39 IST
Last Updated 6 ಜೂನ್ 2022, 7:39 IST
ಚಿತ್ರದುರ್ಗದ ಹಲವೆಡೆ ಸೋಮವಾರ ನಸುಕಿನಲ್ಲಿ ಭಾರಿ ಮಳೆಯಾಗಿದೆ
ಚಿತ್ರದುರ್ಗದ ಹಲವೆಡೆ ಸೋಮವಾರ ನಸುಕಿನಲ್ಲಿ ಭಾರಿ ಮಳೆಯಾಗಿದೆ   

ಚಿತ್ರದುರ್ಗ: ಜಿಲ್ಲೆಯ ಹಲವೆಡೆ ಸೋಮವಾರ ನಸುಕಿನಲ್ಲಿ ಭಾರಿ ಮಳೆಯಾಗಿದೆ. ಹಿರಿಯೂರು ನಗರದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅನೇಕ ಮನೆಗಳು ಜಲಾವೃತಗೊಂಡಿವೆ.

ನಸುಕಿನ 2 ಗಂಟೆ ಸುಮಾರಿಗೆ ಆರಂಭವಾದ ಮಳೆ ಬೆಳಿಗ್ಗೆ ವರೆಗೂ ನಿರಂತವಾಗಿ ಸುರಿದಿದೆ. ಹಿರಿಯೂರಿನ ಸಿಎಂ ಬಡಾವಣೆಯಲ್ಲಿ ನೀರು ಕೆರೆಯಂತೆ ನಿಂತಿದೆ. ಮನೆಗೆ ನುಗ್ಗಿದ ನೀರನ್ನು ಹೊರಹಾಕಲು ನಿವಾಸಿಗಳು ಹರಸಾಹಸಪಡುತ್ತಿದ್ದಾರೆ.

ಉಡುವಳ್ಳಿ ಕೆರೆ ಭರ್ತಿಯಾಗಿದ್ದು, ಕೋಡಿ ಬೀಳುವ ಹಂತ ತಲುಪಿದೆ. ವಾಣಿವಿಲಾಸ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ದಿಢೀರ್ ಏರಿಕೆಯಾಗಿದೆ. 5,300 ಕ್ಯೂಸೆಕ್ ನೀರು ಜಲಾಶಯಕ್ಕೆ ಹರಿದು ಬರುತ್ತಿದೆ. ಕಾತ್ರಿಕೆನಹಳ್ಳಿಯ ಬ್ಯಾರೇಜ್ ತುಂಬಿ ಹರಿಯುತ್ತಿದೆ.

ADVERTISEMENT

ಚಳ್ಳಕೆರೆ ತಾಲ್ಲೂಕಿನ ನಾಯಕನಹಟ್ಟಿ ವ್ಯಾಪ್ತಿಯಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಬಿರುಗಾಳಿ ಸಹಿತ ಸುರಿದ ಮಳೆಗೆ ದುರ್ಗಾವರ ಗ್ರಾಮದಲ್ಲಿ ಮೊಬೈಲ್ ಟವರ್ ಉರುಳಿ ಬಿದ್ದಿದೆ. ಟವರ್ ಬಿದ್ದ ಪರಿಣಾಮ ಪಕ್ಕದಲ್ಲಿದ್ದ ಅಂಗಡಿವೊಂದು ಜಖಂಗೊಂಡಿದೆ.

ಹಿರಿಯೂರು ತಾಲ್ಲೂಕಿನ ಕಾತ್ರಿಕೆ ನ ಹಳ್ಳಿಯ ಬ್ಯಾರೇಜ್ ಸೋಮವಾರ ಬೆಳಗಿನ ಜಾವ ಸುರಿದ ಮಳೆಗೆಕೋಡಿ ಹರಿಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.