ADVERTISEMENT

‘ಸ್ವಾಭಿಮಾನದ ಬದುಕು ಕಲ್ಪಿಸಿಕೊಟ್ಟ ನಾಯಕ’

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2021, 5:26 IST
Last Updated 15 ಏಪ್ರಿಲ್ 2021, 5:26 IST
ಹಿರಿಯೂರಿನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ತಹಶೀಲ್ದಾರ್ ಜಿ.ಎಚ್. ಸತ್ಯನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಪ್ರತಿಜ್ಞೆ ಸ್ವೀಕರಿಸಲಾಯಿತು
ಹಿರಿಯೂರಿನ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ತಹಶೀಲ್ದಾರ್ ಜಿ.ಎಚ್. ಸತ್ಯನಾರಾಯಣ ಅಧ್ಯಕ್ಷತೆಯಲ್ಲಿ ನಡೆದ ಅಂಬೇಡ್ಕರ್ ಜಯಂತಿಯಲ್ಲಿ ಪ್ರತಿಜ್ಞೆ ಸ್ವೀಕರಿಸಲಾಯಿತು   

ಹಿರಿಯೂರು:‘ಶಿಕ್ಷಣ, ಸಂಘಟನೆ ಮತ್ತು ಹೋರಾಟ ಎಂಬ ತ್ರಿವಳಿ ಸೂತ್ರಗಳನ್ನು ಇಟ್ಟುಕೊಂಡು ಆಂದೋಲನ ಆರಂಭಿಸಿ, ಪರಿಶಿಷ್ಟ ಜಾತಿಯವರಿಗೆ ಸ್ವಾಭಿಮಾನದ ಬದುಕು ಕಲ್ಪಿಸಿಕೊಟ್ಟ ಮಹಾನ್ ನಾಯಕ ಡಾ. ಬಾಬಾಸಾಹೇಬ್ ಅಂಬೇಡ್ಕರ್’ ಎಂದು ಪ್ರಾಂಶುಪಾಲ ಡಾ. ಧರಣೇಂದ್ರಯ್ಯ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ನೇತೃತ್ವದಲ್ಲಿ ನಗರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿಯಲ್ಲಿ ಅವರು ಉಪನ್ಯಾಸ ನೀಡಿದರು.

ತಹಶೀಲ್ದಾರ್ ಜಿ.ಎಚ್. ಸತ್ಯನಾರಾಯಣ ಅಧ್ಯಕ್ಷತೆ ವಹಿಸಿದ್ದರು.

ADVERTISEMENT

ಡಿವೈಎಸ್ಪಿ ರೋಷನ್ ಜಮೀರ್, ಸಿಪಿಐ ರಾಘವೇಂದ್ರ, ಮುಖಂಡರಾದ ಜಿ.ಎಲ್.ಮೂರ್ತಿ, ಬಿ.ಸಿದ್ದಪ್ಪ, ಬೋರನಕುಂಟೆ ಜೀವೇಶ್, ಸಮಾಜಸೇವಕಿ ಶಶಿಕಲಾ ರವಿಶಂಕರ್ ಮಾತನಾಡಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮೀದೇವಿ, ನಗರಸಭಾಧ್ಯಕ್ಷೆ ಷಂಸುನ್ನಿಸಾ, ಸ್ಥಾಯಿ ಸಮಿತಿ ಅಧ್ಯಕ್ಷ ಚಿತ್ರಜಿತ್ ಯಾದವ್, ಪೌರಾಯುಕ್ತೆ ಲೀಲಾವತಿ, ನಗರಠಾಣೆ ಸಿಪಿಐ ಶಿವಕುಮಾರ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕೃಷ್ಣಮೂರ್ತಿ, ಕೆ.ಓಂಕಾರಪ್ಪ, ತಿಪ್ಪಮ್ಮ, ಬಬ್ಬೂರು ಪರಮೇಶ್ವರಪ್ಪ, ಐಮಂಗಲ ಹರೀಶ್, ಶಿವಕುಮಾರ್, ಮಹೇಶ್ ಇದ್ದರು.

ಬಹುಜನ ಸಮಾಜ ಪಾರ್ಟಿ: ನಗರದ ಪ್ರವಾಸಿ ಮಂದಿರ ವೃತ್ತದಲ್ಲಿರುವ ಅಂಬೇಡ್ಕರ್ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಬಹುಜನ ಸಮಾಜ ಪಕ್ಷದ ತಾಲ್ಲೂಕು ಘಟಕದ ಅಧ್ಯಕ್ಷ ಎಂ. ಜಗದೀಶ್ ಅಂಬೇಡ್ಕರ್ ಜಯಂತಿಗೆ ಚಾಲನೆ ನೀಡಿದರು.

ಪಕ್ಷದ ಕಾರ್ಯದರ್ಶಿ ರಾಘವೇಂದ್ರ ಮಾತನಾಡಿದರು. ರಾಮಚಂದ್ರ ನಾಯಕ, ಲಕ್ಷ್ಮಣ್, ತಿಪ್ಪನಾಯಕ, ಗುರು, ಪ್ರಭು, ಶಿವ, ರಂಗ, ರಘುಸಕ್ಕರ, ರುದ್ರಪ್ಪ, ರಂಗಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.