ADVERTISEMENT

ಹಿರೇಕೆರೆಹಳ್ಳಿ: ಬಾಲ್ಯವಿವಾಹ ಜಾಗೃತಿ ಕಾರ್ಯಾಗಾರ

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 14:01 IST
Last Updated 19 ಜೂನ್ 2025, 14:01 IST
ಮೊಳಕಾಲ್ಮುರು ತಾಲ್ಲೂಕಿನ ಹಿರೇಕೆರೆಹಳ್ಳಿಯಲ್ಲಿ ಬುಧವಾರ ನಡೆದ ಕಾರ್ಯಾಗಾರದಲ್ಲಿ ಪಿಎಸ್‌ಐ ಮಹೇಶ್‌ ಹೊಸಪೇಟೆ ಮಾತನಾಡಿದರು
ಮೊಳಕಾಲ್ಮುರು ತಾಲ್ಲೂಕಿನ ಹಿರೇಕೆರೆಹಳ್ಳಿಯಲ್ಲಿ ಬುಧವಾರ ನಡೆದ ಕಾರ್ಯಾಗಾರದಲ್ಲಿ ಪಿಎಸ್‌ಐ ಮಹೇಶ್‌ ಹೊಸಪೇಟೆ ಮಾತನಾಡಿದರು   

ಮೊಳಕಾಲ್ಮುರು: ಸರ್ಕಾರ ಸಾಕಷ್ಟು ಜಾಗೃತಿ ಮೂಡಿಸುವ ಜತೆಗೆ ಕಾನೂನುಗಳನ್ನು ಜಾರಿಗೆ ತಂದಿದ್ದರೂ ಬಾಲ್ಯವಿವಾಹ ಪ್ರಕರಣಗಳು ಆಗಾಗ ವರದಿಯಾಗುತ್ತಿರುವುದು ಅಂತಕದ ಸಂಗತಿ ಎಂದು ಪಿಎಸ್‌ಐ ಮಹೇಶ್‌ ಹೊಸಪೇಟೆ ಹೇಳಿದರು.

ತಾಲ್ಲೂಕಿನ ಹಿರೇಕೆರೆಹಳ್ಳಿಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೊಲೀಸ್‌ ಇಲಾಖೆ ಮತ್ತು ಗ್ರಾಮ ಪಂಚಾಯಿತಿಯಿಂದ ಬುಧವಾರ ಹಮ್ಮಿಕೊಂಡಿದ್ದ ಬಾಲ್ಯವಿವಾಹ ನಿಷೇಧ ಕಾಯ್ದೆ ಮತು ಪೋಕ್ಸೊ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಈ ಗ್ರಾಮದ ಸುತ್ತಮುತ್ತ ಬಾಲ್ಯವಿವಾಹ ಪ್ರಕರಣಗಳು ವರದಿಯಾಗಿವೆ. ಸಂಬಂಧಪಟ್ಟ ಪಾಲಕರಿಗೆ ತಿಳಿ ಹೇಳಲಾಗಿದೆ. ಘಟನೆ ಮರುಕಳಿಸಬಾರದು ಎಂಬ ಉದ್ದೇಶದಿಂದ ಜಾಗೃತಿ ಮೂಡಿಸಲಾಗುತ್ತಿದೆ. ಕಾನೂನು ಉಲ್ಲಂಘನೆ ಮಾಡಿದಲ್ಲಿ ಪಾಲಕರಿಗೆ, ಸಹಕರಿಸಿದವರಿಗೆ ಶಿಕ್ಷೆ ವಿಧಿಸಲು ಅವಕಾಶವಿದೆ ಎಂದರು.

ADVERTISEMENT

ಬಾಲ್ಯವಿವಾಹ ಘಟನೆಗಳು ಕಂಡುಬಂದಲ್ಲಿ ಸಹಾಯವಾಣಿ ಸಂಖ್ಯೆ 1098 ಸಂಖ್ಯೆಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ ಎಂದು ತಾಲ್ಲೂಕು ಶಿಶು ಅಭಿವೃದ್ಧಿ ಅಧಿಕಾರಿ ನವೀನ್‌ ಕುಮಾರ್‌ ತಿಳಿಸಿದರು.

ಮಹಿಳಾ ಮೇಲ್ವಿಚಾರಕಿ ಲೀಲಾಬಾಯಿ, ಪಿಡಿಒ ರಮೇಶ್‌, ಗ್ರಾಮಪಂಚಾಯಿತಿ ಉಪಾಧ್ಯಕ್ಷೆ ಮಲಿಯಮ್ಮ, ಸದಸ್ಯ ಮಹಾಂತೇಶ್‌ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.