ಹಿರಿಯೂರು: ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ನಡೆಸಲು ಉದ್ದೇಶಿಸಿರುವ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದ ಸಿದ್ಧತಾ ಸಭೆ ನಗರಸಭೆ ಕಾರ್ಯಾಲಯದಲ್ಲಿ ಗುರುವಾರ ನಡೆಯಿತು.
ಸೆ.15 ರಂದು ಆಯೋಜಿಸಿರುವ ಮಾನವ ಸರಪಳಿ ನಿರ್ಮಾಣ ಕಾರ್ಯಕ್ರಮದ ಜವಾಬ್ದಾರಿಯನ್ನು ಹಂಚಿಕೆ ಮಾಡಿದ್ದು, ಪ್ರತಿಯೊಬ್ಬರು ತಮ್ಮ ಜವಾಬ್ದಾರಿಯನ್ನು ನಿರ್ವಹಿಸುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಮಧು ಸೂಚಿಸಿದರು. ಹಿರಿಯೂರು ಹಾಗೂ ಹೊಸದುರ್ಗ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಕಾಲೇಜು ಪ್ರಾಂಶುಪಾಲರು ಪಾಲ್ಗೊಂಡಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದರು.
ವಿಶೇಷ ಭೂಸ್ವಾಧೀನ ಅಧಿಕಾರಿ ವೆಂಕಟೇಶ್ ನಾಯ್ಕ, ಪ್ಲಾನಿಂಗ್ ಆಫೀಸರ್ ಮಹೇಂದ್ರ ಕುಮಾರ್ ಹಾಗೂ ಜಿ.ಪಂ. ಮುಖ್ಯ ಲೆಕ್ಕಾಧಿಕಾರಿ ಮಧು ಅವರನ್ನು ತಾಲ್ಲೂಕು ನೋಡೆಲ್ ಅಧಿಕಾರಿಗಳನ್ನಾಗಿ ನೇಮಿಸಲಾಯಿತು. ಇದಲ್ಲದೇ ಉಸ್ತುವಾರಿಗೆ 5 ಕಿ.ಮೀ.ಗೆ ಒಬ್ಬರಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು, 1 ಕಿ.ಮೀ.ಗೆ ಒಬ್ಬರಂತೆ ಶಾಲೆಯ ಮುಖ್ಯ ಶಿಕ್ಷಕರು, ಪ್ರತಿ 100 ಮೀ.ಗೆ ಸಹ ಶಿಕ್ಷಕರು, ಪಿಡಿಓ, ಗ್ರಾಮ ಆಡಳಿತಾಧಿಕಾರಿಗಳನ್ನು ನೇಮಿಸಲಾಯಿತು.
ಮಾನವ ಸರಪಳಿ ಸಂಪನ್ಮೂಲ ಕ್ರೂಢೀಕರಣಕ್ಕಾಗಿ ಎಲ್ಲಾ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗೆ ಕಾರ್ಯಭಾರ ಹಂಚಿಕೆ ಮಾಡಲಾಯಿತು.
ಸಭೆಯಲ್ಲಿ ತಹಶೀಲ್ದಾರ್ ಸಿ.ರಾಜೇಶ್ ಕುಮಾರ್, ಬಿಇಒ ಸಿ.ಎಂ.ತಿಪ್ಪೇಸ್ವಾಮಿ, ಸಿಡಿಪಿಒ ರಾಘವೇಂದ್ರ, ತೋಟಗಾರಿಕೆ ಇಲಾಖೆ ಅಧಿಕಾರಿ ಲೋಕೇಶ್, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ವೆಂಕಟೇಶ್, ಕೃಷಿ ಇಲಾಖೆ ಅಧಿಕಾರಿ ಮಂಜುನಾಥ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ದಿನೇಶ್, ಪ್ರಾಂಶುಪಾಲರಾದ ಮಹೇಶ್ವರಪ್ಪ, ಬಿ.ಆರ್.ಹನುಮಂತರಾಯ, ವಿ. ವೀರಣ್ಣ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.