ಹಿರಿಯೂರು: ನಿಷೇಧಿತ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ 12 ಅಂಗಡಿಗಳ ಮಾಲೀಕರಿಗೆ ನಗರಸಭೆ ಆರೋಗ್ಯಾಧಿಕಾರಿಗಳಾದ ಸಂಧ್ಯಾ ಮತ್ತು ಅಶೋಕ್ ಬುಧವಾರ ₹6 ಸಾವಿರ ದಂಡ ವಿಧಿಸಿ, ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಕ್ಕೆ ಪಡೆದಿದ್ದಾರೆ.
ನಿಷೇಧಿತ ವಸ್ತುಗಳನ್ನು ಮಾರಾಟ ಮಾಡುವ, ಉದ್ದಿಮೆ ಪರವಾನಗಿ ಪಡೆಯದೆ ವಹಿವಾಟು ನಡೆಸುವ ಮಾಲೀಕರಿಗೆ ದಂಡ ವಿಧಿಸಲಾಗುವುದು. ಅಂಗಡಿಗೆ ಬರುವಾಗ ಮನೆಯಿಂದ ಬಟ್ಟೆಯ ಚೀಲ ತರುವಂತೆ ಗ್ರಾಹಕರಿಗೂ ತಿಳಿಸಬೇಕು ಎಂದು ವರ್ತಕರಿಗೆ ಸೂಚನೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.