
ಪ್ರಜಾವಾಣಿ ವಾರ್ತೆಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಬಳಿ ಗುರುವಾರ ನಸುಕಿನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕ್ಯಾಂಟರ್ ಡಿಕ್ಕಿ ಹೊಡೆದ ರಭಸಕ್ಕೆ ಸೀಬರ್ಡ್ ಸ್ಲೀಪರ್ ನಾನ್ ಎಸಿ ಬಸ್ ಸುಟ್ಟು ಕರಕಲಾಗಿದ್ದು, ಐವರು ಸಜೀವವಾಗಿ ದಹನಗೊಂಡಿದ್ದಾರೆ. 6 ಮಂದಿ ನಾಪತ್ತೆಯಾಗಿದ್ದು, 21 ಮಂದಿ ಗಾಯಗೊಂಡಿದ್ದಾರೆ. ಹರಿಯಾಣ ನೋಂದಣಿಯ ಕ್ಯಾಂಟರ್ ಚಾಲಕ ಕೂಡ ಮೃತಪಟ್ಟಿದ್ದಾನೆ. ಬಸ್ ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.