ಪ್ರಜಾವಾಣಿ ವಾರ್ತೆ
ಹಿರಿಯೂರು: ಇಲ್ಲಿನ ನಗರಸಭೆ ಅಧ್ಯಕ್ಷ ಅಜಯಕುಮಾರ್ ಮಂಗಳವಾರ ರಾಜೀನಾಮೆ ಸಲ್ಲಿಸಿದ್ದಾರೆ.
ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿರುವ ಅವರು ತಮ್ಮ 9 ತಿಂಗಳ ಅವಧಿಯಲ್ಲಿ ಮಾಡಿರುವ ಸಾಧನೆಗಾಗಿ ತೃಪ್ತಿ ವ್ಯಕ್ತಪಡಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹಾಗೂ ಕಾಂಗ್ರೆಸ್ ಪಕ್ಷದ ಹಿತದೃಷ್ಟಿಯಿಂದ ತಮ್ಮ ಹುದ್ದೆಗೆ ರಾಜೀನಾಮೆ ನೀಡುತ್ತಿರುವುದಾಗಿ ಅವರು ಹೇಳಿದ್ದಾರೆ.
31 ಸದಸ್ಯ ಬಲದ ನಗರಸಭೆಯಲ್ಲಿ ಜೂನ್ 9 ರಂದು 26 ಸದಸ್ಯರು ಅಜಯ್ ಕುಮಾರ್ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.