ಹಿರಿಯೂರು: ‘ಸರ್ಕಾರದ ನಿರ್ದೇಶನದ ಮೇರೆಗೆ ನಗರದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಶನಿವಾರದಿಂದ ಫೀವರ್ ಕ್ಲಿನಿಕ್ ಆರಂಭವಾಗಿದ್ದು, ನಗರದಲ್ಲಿ ಯಾರಿಗಾದರೂ ಶೀತ, ನೆಗಡಿ, ಕೆಮ್ಮು, ಜ್ವರ ಕಂಡು ಬಂದಲ್ಲಿ ತಕ್ಷಣ ಕ್ಲಿನಿಕ್‌ನಲ್ಲಿ ತಪಾಸಣೆ ಮಾಡಿಸಿಕೊಳ್ಳಬೇಕು’ ಎಂದು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ. ಮೋಹನ್ ಮನವಿ ಮಾಡಿದ್ದಾರೆ.
‘ಜ್ವರ ಕಾಣಿಸಿಕೊಳ್ಳುವುದು ಕೊರೊನಾ ಲಕ್ಷಣಗಳಲ್ಲಿ ಒಂದಾಗಿದ್ದು, ಫೀವರ್ ಕ್ಲಿನಿಕ್‌ನಲ್ಲಿ ಜ್ವರದ ಲಕ್ಷಣ ಆಧರಿಸಿ ಚಿಕಿತ್ಸೆ ನೀಡಲಾಗುತ್ತದೆ. ಜ್ವರದ ತೀವ್ರತೆ ಹೆಚ್ಚಿದ್ದಲ್ಲಿ ಐಸೋಲೇಷನ್‌ನಲ್ಲಿ ಇಟ್ಟುಕೊಳ್ಳುತ್ತೇವೆ. ಇಲ್ಲವಾದರೆ ಮನೆಗೆ ಕಳಿಸುತ್ತೇವೆ. ಫೀವರ್ ಕ್ಲಿನಿಕ್ ಆರಂಭಿಸಿರುವ ಕಾರಣ ರೋಗಿಗಳ ಮೇಲೆ ನಿಗಾ ಇಡಲು ಸಹಕಾರಿಯಾಗಲಿದೆ’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.