ADVERTISEMENT

ಹಿರಿಯೂರು | ಬಾಲ್ಯ ವಿವಾಹ ಮಾಡಿ ತರಿತಪಿಸಬೇಡಿ: ಎಸ್ಐ ಅನುಸೂಯಾ

​ಪ್ರಜಾವಾಣಿ ವಾರ್ತೆ
Published 19 ಜೂನ್ 2025, 14:12 IST
Last Updated 19 ಜೂನ್ 2025, 14:12 IST
ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಎಸ್ಐ ಅನುಸೂಯ ಗ್ರಾಮಸ್ಥರೊಂದಿಗೆ ಮಾತನಾಡಿದರು
ಹಿರಿಯೂರು ತಾಲ್ಲೂಕಿನ ಮೇಟಿಕುರ್ಕೆ ಗ್ರಾಮದಲ್ಲಿ ಬುಧವಾರ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಎಸ್ಐ ಅನುಸೂಯ ಗ್ರಾಮಸ್ಥರೊಂದಿಗೆ ಮಾತನಾಡಿದರು   

ಹಿರಿಯೂರು: ‘ಉತ್ತಮವಾಗಿ ಓದಿ ಭವಿಷ್ಯವನ್ನು ರೂಪಿಸಿಕೊಳ್ಳಬೇಕಾದ ಹೆಣ್ಣುಮಕ್ಕಳಿಗೆ ಬಾಲ್ಯದಲ್ಲಿಯೇ ಮದುವೆ ಮಾಡಿ ಅವರ ಭವಿಷ್ಯ ಹಾಳು ಮಾಡಬಾರದು’ ಎಂದು ಗ್ರಾಮಾಂತರ ಠಾಣೆ ಎಸ್ಐ ಅನುಸೂಯಾ ಹೇಳಿದರು.

ತಾಲ್ಲೂಕಿನ ಜವನಗೊಂಡನಹಳ್ಳಿ ಮತ್ತು ಮೇಟಿಕುರ್ಕೆ ಗ್ರಾಮಗಳಲ್ಲಿ ಗ್ರಾಮಾಂತರ ಪೊಲೀಸ್ ಇಲಾಖೆಯಿಂದ ಬಾಲ್ಯವಿವಾಹ ನಿಷೇಧ ಕುರಿತು ಬುಧವಾರ ಏರ್ಪಡಿಸಿದ್ದ ಜಾಗೃತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಬಾಲ್ಯ ವಿವಾಹಕ್ಕೆ ಮಾಡುವ ಪಾಲಕರು ಮತ್ತು ಸಂಸ್ಥೆಯವರಿಗೆ 2 ವರ್ಷ ಸೆರೆಮನೆ ಮತ್ತು ₹ 1 ಲಕ್ಷ ದಂಡ ವಿಧಿಸುವ ಅವಕಾಶವಿದೆ. ಕಲ್ಲುವಳ್ಳಿ ಭಾಗದಲ್ಲಿ ಬಾಲ್ಯ ವಿವಾಹ ಪ್ರಕರಣಗಳು ಪತ್ತೆಯಾಗುತ್ತಿವೆ. ಚಿಕ್ಕ ವಯಸ್ಸಿಗೆ ಮದುವೆ ಮಾಡುವ ಯೋಚನೆ ಬಿಟ್ಟು ಶಿಕ್ಷಣ ಕೊಡಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ಬೈಕ್ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಬೇಕು. 18 ವರ್ಷದೊಳಗಿನ ಮಕ್ಕಳು ವಾಹನ ಚಾಲನೆ ಮಾಡಬಾರದು. ಮಕ್ಕಳಿಗೆ ವಾಹನ ಕೊಟ್ಟವರಿಗೆ ದಂಡ ವಿಧಿಸಲಾಗುವುದು. ಚಾಲನಾ ಪರವಾನಗಿ, ವಿಮೆ ಇಲ್ಲದೆ ವಾಹನ ಓಡಿಸಬೇಡಿ. ರಸ್ತೆಯಲ್ಲಿ ವ್ಹೀಲಿ ಮಾಡಬೇಡಿ’ ಎಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಗ್ರಾಮಾಂತರ ಪೊಲೀಸ್ ಠಾಣೆ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.