ADVERTISEMENT

ಹಿರಿಯೂರು: ಶಫೀವುಲ್ಲಾಗೆ ಸಾಹಿತ್ಯ ರತ್ನ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2026, 5:45 IST
Last Updated 23 ಫೆಬ್ರುವರಿ 2026, 5:45 IST
ಶಫೀವುಲ್ಲಾ.
ಶಫೀವುಲ್ಲಾ.   

ಹಿರಿಯೂರು: ನಗರದ ಗಂಗಾ ಸೆಂಟ್ರಲ್ ಸ್ಕೂಲ್‌ನ ಉಪನ್ಯಾಸಕ ಎಸ್.ಎಚ್. ಶಫೀವುಲ್ಲಾ ಅವರಿಗೆ ಸಾಹಿತ್ಯ ಕ್ಷೇತ್ರದಲ್ಲಿನ ಸೇವೆಗಾಗಿ ತನುಶ್ರೀ ಸಾಹಿತ್ಯ ಮತ್ತು ಸಾಂಸ್ಕೃತಿಕ ಕಲಾವೇದಿಕೆ ಹಾಗೂ ಬೆಳಕು ಸಾಹಿತ್ಯ ಸಾಂಸ್ಕೃತಿಕ ಶೈಕ್ಷಣಿಕ ಟ್ರಸ್ಟ್‌ನವರು ರಾಷ್ಟ್ರಮಟ್ಟದ ಸಾಹಿತ್ಯ ರತ್ನ ಪ್ರಶಸ್ತಿಗೆ ಆಯ್ಕೆ ಮಾಡಿದ್ದಾರೆ.

ಶಫೀವುಲ್ಲಾ ಅವರು, ಸಂಧ್ಯಾರಗಳೆ ಮತ್ತು ಇತರ ಕಥೆಗಳು ಎಂಬ ಕಥಾ ಸಂಕಲನ, ಕಣ್ಮರೆ ಎಂಬ ಕಾದಂಬರಿ ಹಾಗೂ ಬೆಳಗು ಭಾವ ಎಂಬ ಶೀರ್ಷಿಕೆಡಿಯಲ್ಲಿ 1,500ಕ್ಕೂ ಹೆಚ್ಚು ಪದ್ಯಗಳನ್ನು ಬರೆದಿದ್ದಾರೆ. 

ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ಮಾರ್ಚ್ 1 ರಂದು ನಡೆಯುವ ರಾಷ್ಟ್ರಮಟ್ಟದ ಕಲಾ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್‌ನ ರಾಜು ಸೂಲೆನಹಳ್ಳಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.