ADVERTISEMENT

ಹಿರಿಯೂರು | ರಸ್ತೆ ಅಭಿವೃದ್ಧಿ: ಜಾರಕಿಹೊಳಿಗೆ ಮನವಿ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2025, 14:03 IST
Last Updated 1 ಮಾರ್ಚ್ 2025, 14:03 IST
ಹಿರಿಯೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಲಾಯಿತು
ಹಿರಿಯೂರಿನಲ್ಲಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಲಾಯಿತು   

ಹಿರಿಯೂರು: ತಾಲ್ಲೂಕಿನಲ್ಲಿ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ಶೀಘ್ರವೇ ಅನುದಾನ ಬಿಡುಗಡೆ ಮಾಡಿ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಒತ್ತಾಯಿಸಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್ ನೇತೃತ್ವದಲ್ಲಿ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

ನಗರದ ಬೈಪಾಸ್‌ನಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಕಾಂಗ್ರೆಸ್ ಮುಖಂಡರ ಜತೆ ಭೇಟಿ ಮಾಡಿ ಈ ಬಗ್ಗೆ ಚರ್ಚಿಸಿದರು.

ಮೇಟಿಕುರ್ಕೆ–ಶಿಡ್ಲಯ್ಯನಕೋಟೆ, ಎಂ.ಡಿ. ಕೋಟೆ–ರಂಗೇನಹಳ್ಳಿ ರಸ್ತೆಗೆ ಒಟ್ಟು ₹2,190 ಕೋಟಿ ಅನುದಾನ ಅಗತ್ಯವಿದೆ ಎಂದರು. 

ADVERTISEMENT

ಆದ್ಯತೆಯ ಮೇಲೆ ರಸ್ತೆಗಳ ಸುಧಾರಣೆ ಮಾಡಲಾಗುವುದು ಎಂದು ಜಾರಕಿಹೊಳಿ ಭರವಸೆ ನೀಡಿದರು.

ಅಮೃತೇಶ್ವರಸ್ವಾಮಿ, ಈರಲಿಂಗೇಗೌಡ, ಕಂದಿಕೆರೆ ಸುರೇಶ್ ಬಾಬು, ಸೂರಗೊಂಡನಹಳ್ಳಿ ಕೃಷ್ಣಮೂರ್ತಿ, ಅಂಬಿಕಾ ಆರಾಧ್ಯ, ಅನಿಲ್ ಕುಮಾರ್, ಗಿಡ್ಡೋಬನಹಳ್ಳಿ ಅಶೋಕ್, ಕಲ್ಲಟ್ಟಿ ಹರೀಶ್, ವಿ. ಶಿವಕುಮಾರ್, ಜ್ಞಾನೇಶ್, ಮದಲಮರಿಯಾ, ಮಮತ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.