ADVERTISEMENT

ಅಪಘಾತ: ಇಬ್ಬರು ಬೆಸ್ಕಾಂ ನೌಕರರ ಸಾವು

​ಪ್ರಜಾವಾಣಿ ವಾರ್ತೆ
Published 6 ನವೆಂಬರ್ 2022, 9:16 IST
Last Updated 6 ನವೆಂಬರ್ 2022, 9:16 IST
ಅಪಘಾತದಲ್ಲಿ ಮೃತರಾದ ಕರಿಬಸಪ್ಪ, ಪ್ರದೀಪ್ ಕುಮಾರ್
ಅಪಘಾತದಲ್ಲಿ ಮೃತರಾದ ಕರಿಬಸಪ್ಪ, ಪ್ರದೀಪ್ ಕುಮಾರ್    

ಹಿರಿಯೂರು: ತಾಲ್ಲೂಕಿನ ಹರ್ತಿಕೋಟೆ ಸಮೀಪ ಭಾನುವಾರ ಸಂಭವಿಸಿದ ಅಪಘಾತದಲ್ಲಿ ಬೆಸ್ಕಾಂನ ಇಬ್ಬರು ನೌಕರರು ಮೃತಪಟ್ಟಿದ್ದಾರೆ.

ಚಿತ್ರದುರ್ಗ ತಾಲ್ಲೂಕಿನ ಬಹದ್ದೂರ್ ಘಟ್ಟ ಗ್ರಾಮದ ಪ್ರದೀಪ್ ಕುಮಾರ್ (38) ಹಾಗೂ ಮೊಳಕಾಲ್ಮುರು ತಾಲ್ಲೂಕಿನ ಕರಿಬಸಪ್ಪ (25) ಮೃತಪಟ್ಟವರು. ಇವರು ಮೊಳಕಾಲ್ಮುರು ತಾಲ್ಲೂಕಿನ ಬಿ.ಜಿ.ಕೆರೆ ಬೆಸ್ಕಾಂ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು.

ನೌಕರರಿಬ್ಬರು ಬೆಂಗಳೂರಿನಿಂದ ಬಿ.ಜಿ.ಕೆರೆಗೆ‌ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದರು. ಹರ್ತಿಕೋಟೆ ಸಮೀಪದ ಹೆದ್ದಾರಿಯಲ್ಲಿ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಪ್ರದೀಪ್ ಕುಮಾರ್ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದು, ನಾಲ್ಕು ತಿಂಗಳ ಮಗು ಇದೆ ಎಂದು ಐಮಂಗಲ ಠಾಣೆಯ ಪೊಲೀಸರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.