ADVERTISEMENT

ಹಿರಿಯೂರು | ವಾಣಿ ಕಾಲೇಜಿಗೆ ₹ 15 ಕೋಟಿ ಅನುದಾನ: ಡಿ. ಸುಧಾಕರ್

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2026, 6:12 IST
Last Updated 1 ಮಾರ್ಚ್ 2026, 6:12 IST
ಹಿರಿಯೂರಿನ ವಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ 3 ಕೋಟಿ ವೆಚ್ಚದ ಸಭಾಭವನವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಉದ್ಘಾಟಿಸಿದರು
ಹಿರಿಯೂರಿನ ವಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ 3 ಕೋಟಿ ವೆಚ್ಚದ ಸಭಾಭವನವನ್ನು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಉದ್ಘಾಟಿಸಿದರು   

ಹಿರಿಯೂರು: ‘2008ರಿಂದ ಇಲ್ಲಿಯವರೆಗೆ ನಗರದ ವಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ₹ 15 ಕೋಟಿ ಅನುದಾನ ತಂದು ಅಭಿವೃದ್ಧಿ ಮಾಡಲಾಗಿದೆ‘ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಹೇಳಿದರು.

ನಗರದ ವಾಣಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ 3 ಕೋಟಿ ವೆಚ್ಚದ ಸಭಾಭವನ ಉದ್ಘಾಟಿಸಿ ಮಾತನಾಡಿದರು.

ಉನ್ನತ ಶಿಕ್ಷಣ ಇಲಾಖೆಯಿಂದ ₹ 5 ಕೋಟಿ, ಕೇಂದ್ರ ಸರ್ಕಾರದಿಂದ ₹ 5 ಕೋಟಿ, ನಗರಸಭೆಯಿಂದ ₹ 3 ಕೋಟಿ ಹಾಗೂ ಶಾಸಕರ ನಿಧಿಯಲ್ಲಿ ₹ 2 ಕೋಟಿ ಅನುದಾನವನ್ನು ನೀಡಲಾಗಿದೆ. ಸರ್ಕಾರ ಕೋಟ್ಯಂತರ ರೂಪಾಯಿ ಹಣವನ್ನು ಸರ್ಕಾರಿ ಶಾಲಾ–ಕಾಲೇಜುಗಳಿಗೆ ಸೌಲಭ್ಯ ಕಲ್ಪಿಸಲು ವಿನಿಯೋಗಿಸುತ್ತಿದ್ದರೂ ವರ್ಷದಿಂದ ವರ್ಷಕ್ಕೆ ಸರ್ಕಾರಿ ಶಿಕ್ಷಣ ಸಂಸ್ಥೆಗಳಿಗೆ ಸೇರುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗುತ್ತಿರುವುದು ಬೇಸರದ ಸಂಗತಿ. ಶಿಕ್ಷಣ ತಜ್ಞರು ಈ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಬೇಕು ಎಂದು ಮನವಿ ಮಾಡಿದರು.

ADVERTISEMENT

ಪ್ರೊ. ಮಹೇಶ್ ಪ್ರಾಂಶುಪಾಲರಾಗಿ ಅಧಿಕಾರ ವಹಿಸಿಕೊಂಡ ಮೂರು ವರ್ಷದಲ್ಲಿ ಕಾಲೇಜಿಗೆ ₹ 4 ಕೋಟಿ ಅನುದಾನ ತರಲು ಪ್ರಯತ್ನ ನಡೆಸಿದ್ದಾರೆ. ಅವರು ಕಾಲೇಜಿನ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿ ಇಂದು ನಿವೃತ್ತಿ ಹೊಂದುತ್ತಿದ್ದು, ಮುಂದೆಯೂ ಅವರ ಸೇವೆ ಶಿಕ್ಷಣ ಕ್ಷೇತ್ರಕ್ಕೆ ದೊರೆಯಲಿ ಎಂದು ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಜಿ. ಪ್ರೇಮ್ ಕುಮಾರ್ ಹೇಳಿದರು.

ಪ್ರಾಂಶುಪಾಲ ಪ್ರೊ. ಮಹೇಶ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರಾದ ಗಿಡ್ಡೋಬನಹಳ್ಳಿ ಅಶೋಕ್, ಖಾದಿ ರಮೇಶ್, ತಿಮ್ಮಶೆಟ್ಟಿ, ದಿಂಡಾವರ ಮಹೇಶ್, ಪ್ರೊ. ಧರಣೇಂದ್ರಯ್ಯ, ಗಂಗಾಧರ್, ಹೇಮಲತಾ, ವಿ. ಶಿವಕುಮಾರ್ ಹಾಗೂ ಕಾಲೇಜಿನ ಸಿಬ್ಬಂದಿ ಹಾಜರಿದ್ದರು.

ನಿವೃತ್ತಿ ಹೊಂದಿದ ಪ್ರೊ. ಮಹೇಶ್ ಅವರನ್ನು ಸಚಿವರು ಸನ್ಮಾನಿಸಿದರು.