ADVERTISEMENT

ಹಿರಿಯೂರು | ಅಪಘಾತ: ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2022, 5:34 IST
Last Updated 26 ಸೆಪ್ಟೆಂಬರ್ 2022, 5:34 IST

ಹಿರಿಯೂರು (ಚಿತ್ರದುರ್ಗ): ತಾಲ್ಲೂಕಿನ ವಾಣಿವಿಲಾಸಪುರ ರಸ್ತೆಯ ಭರಮಗಿರಿ ಕೆರೆಯ ತಿರುವಿನಲ್ಲಿ ದ್ವಿಚಕ್ರ ವಾಹನ ಹಾಗೂ ಕ್ರೂಸರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾರೆ.

ಮೃತನನ್ನು ಆಂಧ್ರಪ್ರದೇಶದ ವಿನಾಯಕ ನಾಯ್ಡು (30) ಎಂದು ಗುರುತಿಸಲಾಗಿದೆ. ದ್ವಿಚಕ್ರ ವಾಹನದ ಹಿಂಬದಿ ಸವಾರ ಅಪಯ್ಯ ನಾಯ್ಡು ಗಾಯಗೊಂಡಿದ್ದು, ಹಿರಿಯೂರಿನ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಾಣಿವಿಲಾಸಪುರ ಕಡೆಯಿಂದ ಬರುತ್ತಿದ್ದ ಕ್ರೂಸರ್ ವಾಹನವು ಎದುರಿನಿಂದ ಬರುತ್ತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಹಿರಿಯೂರು ಗ್ರಾಮಾಂತರ ಠಾಣೆಯ ಪೊಲೀಸರು ತಿಳಿಸಿದ್ದಾರೆ

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.