ಹಿರಿಯೂರು: ತಾಲ್ಲೂಕಿನಲ್ಲಿ ಎರಡು ದಿನಗಳಿಂದ ಹಗಲು–ರಾತ್ರಿ ಎನ್ನದೆ ಬೀಳುತ್ತಿರುವ ಜಿಟಿಜಿಟಿ ಮಳೆಯಿಂದ ಸಾರ್ವಜನಿಕರು ಹೈರಾಣಾಗಿ ಹೋಗಿದ್ದಾರೆ. ತಾಲ್ಲೂಕಿನ ಪಿಲ್ಲಾಜನಹಳ್ಳಿಯಲ್ಲಿ ಮನೆಯೊಂದು ಕುಸಿದು 4 ಮೇಕೆಗಳು ಮೃತಪಟ್ಟಿರುವ ಘಟನೆ ಸೋಮವಾರ ರಾತ್ರಿ ನಡೆದಿದೆ.
ಚಿತ್ತಪ್ಪ ಎಂಬ ಕುರಿಗಾಯಿಗೆ ಸೇರಿದ ಮೇಕೆಗಳು ಮೃತಪಟ್ಟಿದ್ದು, ಮಣ್ಣಿನಿಂದ ನಿರ್ಮಿಸಿದ್ದ ಹಳೆಯ ಮನೆಯ ಗೋಡೆಗಳು ಮಳೆಯಿಂದಾಗಿ ಕುಸಿದು ಬಿದ್ದಿದೆ. ಮನೆಯಲ್ಲಿದ್ದ ಮೇಕೆಗಳು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದರೆ, ಕುಟುಂಬದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.