
ಹೊಳಲ್ಕೆರೆ: ರಾಜ್ಯ ಹಾಗೂ ದೇಶದ ಅಭಿವೃದ್ಧಿಗೆ ನಾಲ್ವಡಿ ಕೃಷ್ಣ ರಾಜ ಒಡೆಯರ್ ಕೊಡುಗೆ ಅಪಾರ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಬಣ್ಣಿಸಿದರು.
ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಆಯೋಜಿಸಿದ್ದ ನಾಲ್ವಡಿ ಕೃಷ್ಣ ರಾಜ ಒಡೆಯರ್ ಅವರ 140ನೇ ಜಯಂತ್ಯುತ್ಸವ ಉದ್ಘಾಟಿಸಿ ಅವರು ಮಾತನಾಡಿದರು.
ನಾಲ್ವಡಿ ಕೃಷ್ಣರಾಜ ಒಡೆಯರ್ ಮೈಸೂರು ರಾಜ್ಯವನ್ನು ಅಭಿವೃದ್ಧಿಪಡಿಸುವ ಮೂಲಕ ಇಡೀ ದೇಶವೇ ತಿರುಗಿ ನೋಡುವಂತೆ ಮಾಡಿದ್ದರು. ಕೃಷಿ, ಕೈಗಾರಿಕೆ, ನೀರಾವರಿ, ಜಲವಿದ್ಯುತ್, ಆರೋಗ್ಯ, ಶಿಕ್ಷಣ ಮುಂತಾದ ವಲಯಗಳಲ್ಲಿ ಮೈಸೂರು ಮುಂಚೂಣಿಯಲ್ಲಿತ್ತು ಎಂದು ಸ್ಮರಿಸಿದರು.
ವಿಶೇಷ ಉಪನ್ಯಾಸ ನೀಡಿದ ಅರುಣ್ ಜೋಳದ ಕೂಡ್ಲಿಗಿ, ‘ನಾಲ್ವಡಿ ಕೃಷ್ಣರಾಜ ಒಡೆಯರ್ ಜಾಗತಿಕ ಮಟ್ಟದಲ್ಲಿ ಹೆಸರಾಗಿದ್ದರು. ಅವರು ಪ್ರಜಾಪ್ರಭುತ್ವ ಚಿಂತನೆಯಲ್ಲಿ ಆಡಳಿತ ನಡೆಸಿದ್ದರು. ಅವರು ರಾಜಶಾಹಿ ಆಡಳಿತದ ಕಾಲದಲ್ಲೂ ಪ್ರಜಾಪ್ರಭುತ್ವವನ್ನು ಜೀವಂತಗೊಳಿಸಿದರು’ ಎಂದರು.
ಪದವಿ ತರಗತಿಗಳ ಕನ್ನಡ ಭಾಷೆ ವಿಷಯದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ನಾಲ್ವಡಿ ಕೃಷ್ಣರಾಜ ಒಡೆಯರ್ ಸಾಧನೆ ಕುರಿತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾಗಿದ್ದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಎನ್.ಶಿವಮೂರ್ತಿ, ಪ್ರಾಂಶುಪಾಲ ಶಿವಮೂರ್ತಿ ನಾಯ್ಕ, ಕನ್ನಡ ರಕ್ಷಣಾ ವೇದಿಕೆಯ ಅಧ್ಯಕ್ಷ ಪಿ.ಹನುಮಂತಪ್ಪ, ಕೆ.ಬಿ.ಬಸವರಾಜಯ್ಯ, ಜಿ.ಎ.ದೇವರಾಜಯ್ಯ, ಆರ್.ರುದ್ರಪ್ಪ, ಜಿ.ಆರ್.ಬಸವರಾಜಪ್ಪ, ಟಿ.ಮಂಜುನಾಥ್, ಉಪನ್ಯಾಸಕರಾದ ಮಲ್ಲಿಕಾರ್ಜುನ್, ಮಾದಾನಾಯ್ಕ, ಪ್ರವೀಣ್ ಕುಮಾರ್, ರಮೇಶ್, ಸಂತೋಷ್, ಚೇತನ್, ಚೌಳೂರು ಲೋಕೇಶ್, ಜ್ಯೋತಿ ಗಿರೀಶ್, ಸರಿತಾ, ಶಿಕ್ಷಕರ ಸಂಘದ ಅಧ್ಯಕ್ಷ ಎಲ್.ಎ.ಶಿವಕುಮಾರ್, ಪಾವಗಡ ಶಿವಣ್ಣ, ಬಿ.ಜಿ.ಹಳ್ಳಿ ವೆಂಕಟೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.