ಹೊಳಲ್ಕೆರೆ: ಲೋಕಸಭಾ ಚುನಾವಣೆ ಘೋಷಣೆಯಾದ ಹಿನ್ನೆಲೆಯಲ್ಲಿ ತಾಲ್ಲೂಕಿನ ದಾವಣಗೆರೆ, ಚಿಕ್ಕಮಗಳೂರು ಜಿಲ್ಲಾ ಗಡಿಭಾಗಗಳಲ್ಲಿ ಪೊಲೀಸ್ ಚೆಕ್‌ಪೋಸ್ಟ್ ಆರಂಭಿಸಲಾಗಿದೆ.
ದಾವಣಗೆರೆ ಗಡಿ ಭಾಗದ ರಾಷ್ಟ್ರೀಯ ಹೆದ್ದಾರಿ-13ರ ದುಮ್ಮಿ ಹಾಗೂ ಚಿಕ್ಕಮಗಳೂರು ಗಡಿ ಭಾಗದ ಸಿಂಗೇನಹಳ್ಳಿ ಮುಖ್ಯರಸ್ತೆಯಲ್ಲಿ ಭಾನುವಾರ ಚೆಕ್‌ಪೋಸ್ಟ್ ಆರಂಭಿಸಲಾಯಿತು.
‘ನೀತಿ ಸಂಹಿತೆ ಜಾರಿಯಾಗಿರುವುದರಿಂದ ಜಿಲ್ಲೆಯನ್ನು ಪ್ರವೇಶಿಸುವ ಪ್ರತೀ ವಾಹನವನ್ನು ಪರಿಶೀಲನೆ ನಡೆಸಲಾಗುತ್ತಿದೆ. ಅಕ್ರಮ ಹಣ, ಮದ್ಯ ಸರಬರಾಜಿನ ಮೇಲೆ ನಿಗಾ ವಹಿಸಲಾಗಿದೆ. ಚುನಾವಣೆ ಮುಗಿಯುವವರೆಗೂ ಚೆಕ್‌ಪೋಸ್ಟ್ ಕಾರ್ಯನಿರ್ವಹಿಸಲಿದ್ದು, ಪೊಲೀಸರು ದಿನದ 24 ಗಂಟೆಯೂ ಕೆಲಸ ಮಾಡಲಿದ್ದಾರೆ’ ಎಂದು ಪಿಎಸ್‌ಐ ಸುರೇಶ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.