ADVERTISEMENT

ಹೊಳಲ್ಕೆರೆ: ಅಕ್ರಮ ಗೂಡಂಗಡಿ ತೆರವು

​ಪ್ರಜಾವಾಣಿ ವಾರ್ತೆ
Published 24 ಮಾರ್ಚ್ 2020, 16:09 IST
Last Updated 24 ಮಾರ್ಚ್ 2020, 16:09 IST
ಹೊಳಲ್ಕೆರೆಯಲ್ಲಿ ಮಂಗಳವಾರ ಬಸ್ ನಿಲ್ದಾಣದ ಹಿಂಭಾಗ ಇದ್ದ ಗೂಡಂಗಡಿಗಳನ್ನು ತೆರವುಗೊಳಿಸಲಾಯಿತು
ಹೊಳಲ್ಕೆರೆಯಲ್ಲಿ ಮಂಗಳವಾರ ಬಸ್ ನಿಲ್ದಾಣದ ಹಿಂಭಾಗ ಇದ್ದ ಗೂಡಂಗಡಿಗಳನ್ನು ತೆರವುಗೊಳಿಸಲಾಯಿತು   

ಹೊಳಲ್ಕೆರೆ: ಜಿಲ್ಲಾಧಿಕಾರಿ ಆದೇಶದಂತೆ ಮಂಗಳವಾರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಹಿಂಭಾಗ ಇದ್ದ ಅಕ್ರಮ ಗೂಡಂಗಡಿಗಳನ್ನು ತೆರವು ಮಾಡಲಾಯಿತು.

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಾಸಿಂ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ತಂಡವು ಟೀ ಸ್ಟಾಲ್, ಖಾರಾ ಮಂಡಕ್ಕಿ ಮಾರಾಟ ಮಾಡುತ್ತಿದ್ದ ಗೂಡಂಗಡಿಗಳನ್ನು ತೆರವು ಮಾಡಿಸಲಾಯಿತು.

‘ಒಂದು ವಾರದಿಂದ ಗೂಡಂಗಡಿ ತಿನಿಸುಗಳ ಮಾರಾಟ ಬಂದ್ ಮಾಡಲಾಗಿದ್ದರೂ, ಇಲ್ಲಿ ತಿಂಡಿ ಮಾರಾಟ ಮಾಡಲಾಗುತ್ತಿತ್ತು. ಸರ್ಕಾರಿ ಜಾಗದಲ್ಲಿ ಖಾಯಂ ಅಂಗಡಿ ರೂಪದಲ್ಲಿ ಶೆಡ್ ನಿರ್ಮಿಸಿಕೊಂಡಿದ್ದರು. ಅಂಗಡಿಗಳಲ್ಲಿ ಸ್ವಚ್ಛತೆ ಇರಲಿಲ್ಲ. ಆಹಾರ ಪದಾರ್ಥಗಳನ್ನು ಹೊರಗೆ ಇಟ್ಟು ಮಾರಾಟ ಮಾಡಲಾಗುತ್ತಿತ್ತು. ಆದ್ದರಿಂದ ಗೂಡಂಗಡಿ ತೆರವು ಮಾಡಲಾಗಿದೆ’ ಎಂದು ವಾಸಿಂ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.