ಹೊಳಲ್ಕೆರೆ: ಪಟ್ಟಣದ ಎಂ.ಎಂ. ಸರ್ಕಾರಿ ಪ್ರೌಢಶಾಲೆ ಹಾಗೂ ಎನ್‌ಇಎಸ್ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ವಿವಿಧ ನೃತ್ಯ ರೂಪಕಗಳ ಮೂಲಕ ಜನಮನ ರಂಜಿಸಿದರು.
ವೀರಗಾಸೆಯಂತಹ ಜಾನಪದ ಕಲೆ, ಭರತನಾಟ್ಯ, ವಚನ ಸಾಹಿತ್ಯ, ನಾಡು, ನುಡಿಯ ಬಗ್ಗೆ ಜಾಗೃತಿ ಮೂಡಿಸುವ ನೃತ್ಯ ರೂಪಕಗಳನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದರು.
ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಶಾಸಕ ಎಂ.ಚಂದ್ರಪ್ಪ, ‘ಎಂ.ಎಂ. ಸರ್ಕಾರಿ ಶಾಲೆ ತಾಲ್ಲೂಕಿನಲ್ಲಿಯೇ ಪ್ರತಿಷ್ಠಿತ ಶಾಲೆ. ಇಲ್ಲಿ ಎಲ್‌ಕೆಜಿಯಿಂದ ಎಸ್ಎಸ್‌ಎಲ್‌ಸಿವರೆಗೆ 1,000ಕ್ಕೂ ಹೆಚ್ಚು ವಿದ್ಯಾರ್ಥಿಗಳು ಓದುತ್ತಿದ್ದು, ಯಾವುದೇ ಖಾಸಗಿ ಶಾಲೆಗೆ ಕಡಿಮೆ ಇಲ್ಲದಂತೆ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಸರ್ಕಾರಿ ಶಾಲೆಗೆ 3 ಉಚಿತ ಬಸ್ ನೀಡಲಾಗಿದೆ’ ಎಂದರು.
ಕ್ರೀಡಾಕೂಟದಲ್ಲಿ ವಿಜೇತರಾದ ಪಾಲಕರಿಗೆ ಬಹುಮಾನ ವಿತರಿಸಲಾಯಿತು. ಎಸ್ಎಸ್‌ಎಲ್‌ಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಶಾಲೆಯ ಅಭಿವೃದ್ಧಿಗೆ ನೆರವು ನೀಡಿದ ದಾನಿಗಳನ್ನು ಸನ್ಮಾನಿಸಲಾಯಿತು.
ಪುರಸಭೆ ಅಧ್ಯಕ್ಷ ವಿಜಯ ಸಿಂಹ ಖಾಟ್ರೋತ್, ಹಿರಿಯ ವಿದ್ಯಾರ್ಥಿ ಸಂಘದ ಗಿರೀಶ್, ಎಸ್‌ಡಿಎಂಸಿ ಅಧ್ಯಕ್ಷ ಶಂಕರಪ್ಪ, ಗಾಯತ್ರಿ, ಮಾಲಾಶ್ರೀ, ಶ್ರೀಕಾಂತ್, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್. ಶ್ರೀನಿವಾಸ್, ಶಿವರುದ್ರಪ್ಪ, ಮುಖ್ಯಶಿಕ್ಷಕ ಗೋವಿಂದ ನಾಯ್ಕ್, ಜಿ.ಪ್ರಕಾಶ್, ಸಹಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.