ADVERTISEMENT

ಹೊಳಲ್ಕೆರೆ: ರಂಗೋಲಿ ಮೂಲಕ ಸ್ವಚ್ಛತೆಯ ಅರಿವು

​ಪ್ರಜಾವಾಣಿ ವಾರ್ತೆ
Published 17 ಜನವರಿ 2026, 7:35 IST
Last Updated 17 ಜನವರಿ 2026, 7:35 IST
ಹೊಳಲ್ಕೆರೆಯ ಬಸ್ ನಿಲ್ದಾಣದಲ್ಲಿ ಪುರಸಭೆಯಿಂದ ರಂಗೋಲಿ ಮೂಲಕ ಸ್ವಚ್ಛತೆಯ ಅರಿವು ಮೂಡಿಸಲಾಯಿತು 
ಹೊಳಲ್ಕೆರೆಯ ಬಸ್ ನಿಲ್ದಾಣದಲ್ಲಿ ಪುರಸಭೆಯಿಂದ ರಂಗೋಲಿ ಮೂಲಕ ಸ್ವಚ್ಛತೆಯ ಅರಿವು ಮೂಡಿಸಲಾಯಿತು    

ಹೊಳಲ್ಕೆರೆ: ಇಲ್ಲಿನ ಪುರಸಭೆ ಕಾರ್ಯಾಲಯದ ವತಿಯಿಂದ ಸ್ವಚ್ಛತಾ ಇ– ಸೇವಾ ಕಾರ್ಯಕ್ರಮದ ಅಡಿಯಲ್ಲಿ ರಂಗೋಲಿ ಮೂಲಕ ಸಾರ್ವಜನಿಕರಲ್ಲಿ ಸ್ವಚ್ಛತೆಯ ಅರಿವು ಮೂಡಿಸಲಾಯಿತು.

ಪಟ್ಟಣದ ಖಾಸಗಿ ಬಸ್‌ ನಿಲ್ದಾಣದ ಸಮೀಪ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಪುರಸಭೆ ಮುಖ್ಯಾಧಿಕಾರಿ ಡಿ.ಉಮೇಶ್‌ ಮಾತನಾಡಿ, ‘ಸಾರ್ವಜನಿಕರು, ನಾಗರಿಕರು ನಗರದ ಸ್ವಚ್ಛತೆಯನ್ನು ಕಾಪಾಡಬೇಕು. ಎಲೆ, ಅಡಿಕೆ, ಬೀಡಾ, ಗುಟ್ಕಾ ಹಾಕಿಕೊಂಡು ರಸ್ತೆಯಲ್ಲಿ ಉಗಿಯುವುದು, ಎಲ್ಲೆಂದರಲ್ಲಿ ಕಸ ಹಾಕುವ ನೀಚ ಕೆಲಸ ಮಾಡಬಾರದು. ಮನೆ, ಹೋಟೆಲ್, ಕಲ್ಯಾಣ ಮಂಟಪಗಳಲ್ಲಿ ಹಸಿ ಕಸ ಹಾಗೂ ಒಣ ಕಸವನ್ನು ಬೇರ್ಪಡಿಸಿ ಪುರಸಭೆಯ ವಿಲೇವಾರಿ ವಾಹನಕ್ಕೆ ಹಾಕಬೇಕು’ ಎಂದರು.

ಹಿರಿಯ ಆರೋಗ್ಯ ನಿರೀಕ್ಷಕಿ ಟಿ.ಕಲ್ಪನಾ, ಕಿರಿಯ ಆರೋಗ್ಯ ನಿರೀಕ್ಷಕ ಆರ್.ಬಿ.ಹರೀಶ್, ಪ್ರಥಮ ದರ್ಜೆ ಕಂದಾಯ ನೀರೀಕ್ಷಕ ನಾಗಭೂಷಣ, ಪುರಸಭೆ ಸಿಬ್ಬಂದಿ, ಪೌರ ಕಾರ್ಮಿಕರು, ಸಾರ್ವಜನಿಕರು ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.