
ಹೊಸದುರ್ಗ: ವಿದ್ಯಾರ್ಥಿಗಳಿಗೆ ಮೊದಲು ಸಂವಿಧಾನ ಅರ್ಥವಾಗಬೇಕು. ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು ಎಂದು ಶಾಸಕ ಬಿ.ಜಿ. ಗೋವಿಂದಪ್ಪ ಹೇಳಿದರು.
ತಾ.ಪಂ, ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ, ಪುರಸಭೆ ವತಿಯಿಂದ ಪಟ್ಟಣದ ಅಶೋಕ ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ತಾಲ್ಲೂಕಿನ ಎಲ್ಲಾ ಶಾಲೆ ಹಾಗೂ ಗ್ರಂಥಾಲಯಗಳಲ್ಲಿ ಸಂವಿಧಾನ ಓದು ಪುಸ್ತಕವನ್ನು ವಿತರಿಸಲಾಗುವುದು. ಶೈಕ್ಷಣಿಕ, ಆರ್ಥಿಕ, ಸಾಮಾಜಿಕ ಸಮಾನತೆ ಸರ್ವರಲ್ಲ ಇರಬೇಕು. ಪ್ರಜೆಗಳೇ ಪ್ರಭುಗಳನ್ನು ಆಯ್ಕೆ ಮಾಡಿಕೊಳ್ಳುವ ವಿಧಾನ ಸಂವಿಧಾನದಲ್ಲಿದೆ. ಎಂದು ಹೇಳಿದರು.
ಸಂವಿಧಾನವನ್ನು ಕಂಠಪಾಠ ಮಾಡಬೇಡಿ, ಚೆನ್ನಾಗಿ ಅರ್ಥೈಸಿಕೊಳ್ಳಿ. ಆಗ ಮಾತ್ರ ಸಂವಿಧಾನದ ಆಶಯ ತಿಳಿಯುವುದು ಎಂದು ತಹಶೀಲ್ದಾರ್ ತಿರುಪತಿ ಪಾಟೀಲ್ ಹೇಳಿದರು.
ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ಎಚ್. ಬಿಲ್ಲಪ್ಪ, ಸಂವಿಧಾನ ಎಲ್ಲರಿಗೂ ಸಮಾನ ಅವಕಾಶ ಕಲ್ಪಿಸಿದೆ. ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕು ಎಂದು ಹೇಳಿದರು.
ಈ ವೇಳೆ ಮಾದಿಗ ಸಮುದಾಯದ ತಾಲ್ಲೂಕು ಅಧ್ಯಕ್ಷ ಎನ್.ಟಿ. ತಿಪ್ಯ್ಪಯ್ಯ, ಸಿ.ಪಿ.ಐ ರಮೇಶ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಗೋಪಾಲಪ್ಪ, ತಹಶೀಲ್ದಾರ್ ತಿರುಪತಿ ಪಾಟೀಲ್, ತಾ.ಪಂ. ಇಓ ಸುನಿಲ್ ಕುಮಾರ್, ಪುರಸಭೆ ಮುಖ್ಯಾಧಿಕಾರಿ ನಾಗಭೂಷಣ್, ಬಿಇಒ ಸೈಯದ್ ಮೋಸಿನ್, ಬಿ.ಸಿ.ಎಂ ಅಧಿಕಾರಿ ಪ್ರದೀಪ್, ಸಹಾಯಕ ಕೃಷಿ ನಿರ್ದೇಶಕ ಸಿ.ಎಸ್. ಈಶ, ವಲಯ ಅರಣ್ಯಾಧಿಕಾರಿ ಸುನಿಲ್, ಸಾಮಾಜಿಕ ಅರಣ್ಯ ಇಲಾಖೆ ಅಧಿಕಾರಿ ದಯಾನಂದ, ಮುಖಂಡರಾದ ಹೆಗ್ಗೆರೆ ಶಂಕ್ರಪ್ಪ, ಮಲ್ಲಿಕಾರ್ಜುನ್, ಕೈನಡು ಚಂದ್ರಪ್ಪ, ದೇವಿಗೆರೆ ಮಲ್ಲಿಕಾರ್ಜುನ ಇದ್ದರು.
- ‘ಕಾರಣ ಕೇಳಿ ನೋಟಿಸ್ ನೀಡಿ’
ಹೊಸದುರ್ಗ ಪಟ್ಟಣದ ಅಶೋಕ ರಂಗಮಂದಿರದಲ್ಲಿ ಬುಧವಾರ ಆಯೋಜಿಸಿದ್ದ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ಹಲವು ಅಧಿಕಾರಿಗಳು ಗೈರಾಗಿದ್ದರು. ಇದರಿಂದ ಗರಂಆದ ಶಾಸಕ ಬಿ.ಜಿ. ಗೋವಿಂದಪ್ಪ ಕಾರ್ಯಕ್ರಮಕ್ಕೆ ಗೈರಾದ ಅಧಿಕಾರಿಗಳಿಗೆ ಕೂಡಲೇ ಕಾರಣ ಕೇಳಿ ನೋಟಿಸ್ ನೀಡಬೇಕು. ಸರ್ಕಾರಿ ಕಾರ್ಯಕ್ರಮಕ್ಕೆ ಅಧಿಕಾರಿಗಳೇ ಗೈರಾದರೆ ಹೇಗೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.