ಹೊಸದುರ್ಗ: ಭಾರತದ ಪರಂಪರೆಯನ್ನು ಉಳಿಸಿ ಬೆಳೆಸುವ ಕಾರ್ಯ ಶಿಕ್ಷಕರಿಂದಾಗಬೇಕು ಎಂದು ಶಾಸಕ ಬಿ..ಜಿ. ಗೋವಿಂದಪ್ಪ ಹೇಳಿದರು.
ಪಟ್ಟಣದಲ್ಲಿ ಶುಕ್ರವಾರ ನಡೆದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗವು ಗೋವಿಂದಗೌಡ ಪ್ರಶಸ್ತಿಗೆ ಹಾಗೂ ಅದೇ ಶಾಲೆಯ ಇಂಗ್ಲಿಷ್ ಶಿಕ್ಷಕ ಶಿವಶಂಕರ್ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯ ಎಂದರು.
ಚಿತ್ರಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಎ. ಮೋಹನ್ ಮಾತನಾಡಿದರು.
6 ಶಾಲೆಗಳಿಗೆ ಅತ್ಯುತ್ತಮ ಶಾಲಾ ಪ್ರಶಸ್ತಿ: ಬ್ಯಾಡರಹಳ್ಳಿ ಮತ್ತು ಕ್ಯಾದಿಗೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗಳು, ಹಾಗಲಕೆರೆ ಮತ್ತು ಕಬ್ಬಳ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳು, ಲಕ್ಕಿಹಳ್ಳಿ ಸರ್ಕಾರಿ ಪ್ರೌಢಶಾಲೆ ಹಾಗೂ ಬಾಗೂರು ಪರಪ್ಪಸ್ವಾಮಿ ಗ್ರಾಮಾಂತರ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರಿಗೆ ಅತ್ಯುತ್ತಮ ಶಾಲಾ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಬಿಇಒ ಸೈಯದ್ ಮೋಸಿನ್, ಕ್ಷೇತ್ರ ಸಮನ್ವಯಾಧಿಕಾರಿ ಜಿ.ಕೆ. ಶ್ರೀನಿವಾಸ್, ಪುರಸಭೆ ಅಧ್ಯಕ್ಷೆ ರಾಜೇಶ್ವರಿ ಆನಂದ್, ಉಪಾಧ್ಯಕ್ಷೆ ಗೀತಾ ಗಜೇಂದ್ರ, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಬಿ.ಸುನಿಲ್ ಕುಮಾರ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಶಾಂತಕುಮಾರ್, ಶಿಕ್ಷಣ ಸಂಯೋಜಕರಾದ ಶಶಿಧರ್, ಯತೀಶ್, ಕೆಂಚಪ್ಪ, ಅಕ್ಷರ ದಾಸೋಹದ ನಿರ್ದೇಶಕ ಶಾಂತಪ್ಪ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಪ್ರಕಾಶ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ನಾಗರಾಜ್, ಪ್ರಾಥಮಿಕ ಶಾಲೆಗಳ ಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಜಿಪಿಟಿ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಿವಾಸ್, ನೌಕರರ ಸಂಘದ ನಿರ್ದೇಶಕರಾದ ದಿವಾಕರ್, ಅನಂತ್ ಮತ್ತು ಮಲ್ಲೇಶ್ ಸೇರಿದಂತೆ ವಿವಿಧ ಸಂಘಗಳ ಪದಾಧಿಕಾರಿಗಳು, ಶಿಕ್ಷಕರು ಹಾಗೂ ಪ್ರಶಿಕ್ಷಣಾರ್ಥಿಗಳಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.