ಹೊಸದುರ್ಗ: ಪಟ್ಟಣದ ತಾಲ್ಲೂಕು ಕಚೇರಿಗೆ ಗುರುವಾರ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಟಿ. ವೆಂಕಟೇಶ್ ಅವರು ತಾಲ್ಲೂಕು ಆಡಳಿತದ ಕಾರ್ಯ ವೈಖರಿ ಹಾಗೂ ನೂತನ ಕಟ್ಟಡ ಕಾಮಗಾರಿ ಪರಿಶೀಲನೆ ನಡೆಸಿದರು.
ತಾಲ್ಲೂಕು ಕಚೇರಿಯಲ್ಲಿ ಬರ ಪರಿಹಾರ ಸೇರಿ ಕುಡಿಯುವ ನೀರಿನ ವ್ಯವಸ್ಥೆ ಬಗ್ಗೆ ಮಾಹಿತಿ ಪಡೆದರು. ರೆಕಾರ್ಡ್ ರೂಮ್ ಸೇರಿದಂತೆ ಹಲವು ಕೊಠಡಿಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಬೆಳೆ ಪರಿಹಾರ ರೈತರಿಗೆ ದೊರಕಿರುವ ಬಗ್ಗೆ ಮಾಹಿತಿ ಪಡೆದುಕೊಂಡರು.
ಈ ಸಂಬಂಧ ತಾಂತ್ರಿಕ ಸಮಸ್ಯೆಗಳಿದ್ದರೆ ಶೀಘ್ರ ಬಗೆಹರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ತಹಶೀಲ್ದಾರ್ ತಿರುಪತಿ ಪಾಟೀಲ್ ಅವರಿಗೆ ಸೂಚಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.