ಚಿತ್ರದುರ್ಗ: ತಾಲ್ಲೂಕಿನ ಭೀಮಸಮುದ್ರ ಗ್ರಾಮದ ತುರೆಬೈಲು ಬಡಾವಣೆಯಲ್ಲಿ ಶುಕ್ರವಾರ ರಾತ್ರಿ ಸುರಿದ ಮಳೆಗೆ ಮನೆಯೊಂದು ಕುಸಿದು ಬಿದ್ದು 7 ಮೇಕೆ ಮೃತಪಟ್ಟಿವೆ.
ಜಯಪ್ಪ ಎನ್ನುವವರ ಮನೆ ಕುಸಿದಿದೆ. ಮನೆಯಲ್ಲಿ ಜಯಪ್ಪ, ಪತ್ನಿ, ಮಗ, ಮೊಮ್ಮಗ ಮಲಗಿದ್ದರು. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ತಹಶೀಲ್ದಾರ್ ನಾಗವೇಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮಾತನಾಡಿದ ಅವರು ‘ ಒಂದು ವಾರದಿಂದ ಮಳೆ ಸುರಿಯುತ್ತಿದ್ದು ಜಯಪ್ಪ ಅವರ ಮನೆ ಕುಸಿದಿದೆ. ₹ 70 ಸಾವಿರ ಬೆಲೆಬಾಳುವ ಮೇಕೆಗಳು ಸತ್ತಿವೆ. ಸರ್ಕಾರದಿಂದ ದೊರೆಯುವ ಪರಿಹಾರ ಕೊಡಿಸಲಾಗುವುದು’ ಎಂದರು. ಪಶು ವೈದ್ಯರಾದ ಸತೀಶ್ ಭೇಟಿ ನೀಡಿ ಪರಿಶೀಲಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.