ADVERTISEMENT

ಹಿರಿಯೂರು: ಐಸಿಎಆರ್– ಕೃಷಿ ಪದವಿ ಪ್ರವೇಶಕ್ಕೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 28 ಜನವರಿ 2026, 5:49 IST
Last Updated 28 ಜನವರಿ 2026, 5:49 IST
   

ಹಿರಿಯೂರು: ನವದೆಹಲಿಯ ಭಾರತೀಯ ಕೃಷಿ ಅನುಸಂಧಾನ ಪರಿಷತ್ ವತಿಯಿಂದ ಕೃಷಿ ಹಾಗೂ ಕೃಷಿಗೆ ಸಂಬಂಧಿಸಿದ ವಿವಿಧ ಪದವಿಗಳಿಗೆ ಪ್ರವೇಶ ಪಡೆಯಲು ಅಖಿಲ ಭಾರತ ಮಟ್ಟದಲ್ಲಿ ಅರ್ಜಿ ಆಹ್ವಾನಿಸಲಾಗಿದೆ ಎಂದು ತೋಟಗಾರಿಕೆ ಮಹಾವಿದ್ಯಾಲಯದ ಮುಖ್ಯಸ್ಥ ಸುರೇಶ್ ಏಕಬೋಟೆ ತಿಳಿಸಿದ್ದಾರೆ.

ಕಾಮನ್ ಯೂನಿವರ್ಸಿಟಿ ಎಂಟ್ರೆನ್ಸ್– 2026 ಮುಖಾಂತರ ನೋಂದಾಯಿಸಿಕೊಳ್ಳಲು ಜ. 30ರಂದು ರಾತ್ರಿ 11.50ರವರೆಗೆ ಸಮಯಾವಕಾಶವಿದೆ. NTA Portal (https:/cuet.nta.nic,in/) ಹೋಗಿ ಅರ್ಜಿಗಳನ್ನು ಹಾಕಬಹುದು. ಕೃಷಿ ಹಾಗೂ ಕೃಷಿಗೆ ಸಂಬಂಧಿಸಿದ ಕೋರ್ಸ್‌ಗಳಿಗೆ ಸೇರುವ ಇಚ್ಛೆಯುಳ್ಳ ಕರ್ನಾಟಕ ರಾಜ್ಯದ ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಅರ್ಜಿ ಹಾಕಬಹುದಾಗಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT