ಮೊಳಕಾಲ್ಮುರು: ತಾಲ್ಲೂಕಿನ ಆಂಧ್ರಗಡಿಯಲ್ಲಿರುವ ಊಡೇವು ಗ್ರಾಮದ ಗೂಡಂಗಡಿಗಳಲ್ಲಿ ಮದ್ಯ ಅಕ್ರಮ ಮಾರಾಟ ವ್ಯಾಪಕವಾಗಿ ನಡೆಯುತ್ತಿದೆ ಎಂದು ದೂರಿದ ಗ್ರಾಮಸ್ಥರು, ಸೋಮವಾರ ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದರು.
‘ಇತ್ತೀಚಿನ ದಿನಗಳಲ್ಲಿ ಬೇಕಾಬಿಟ್ಟಿಯಾಗಿ ಮದ್ಯ ಮಾರಾಟ ಮಾಡಲಾಗುತ್ತಿದೆ. ಇದರಿಂದ ಗ್ರಾಮದಲ್ಲಿ ಹೆಚ್ಚಾಗಿರುವ ಕೂಲಿ ಕಾರ್ಮಿಕರು ದುಡಿದು ತಂದ ಹಣವನ್ನೆಲ್ಲಾ ಕುಡಿತಕ್ಕೆ ವ್ಯರ್ಥ ಮಾಡುತ್ತಿದ್ದಾರೆ. ಯುವಕರು ಸಹ ಕುಡಿತಕ್ಕೆ ಬಲಿಯಾಗುತ್ತಿದ್ದಾರೆ. ಗ್ರಾಮದ ಹೊರಭಾಗದಲ್ಲಿರುವ ಬಾರ್‌ವೊಂದರ ತ್ಯಾಜ್ಯವನ್ನು ಎಲ್ಲೆಂದರಲ್ಲಿ ಅವೈಜ್ಞಾನಿಕವಾಗಿ ಹಾಕಲಾಗುತ್ತಿದೆ. ಈ ಕುರಿತು ಕ್ರಮ ತೆಗೆದುಕೊಳ್ಳಬೇಕು’ ಎಂದು ಆಗ್ರಹಿಸಿದರು.
ಮನವಿ ಸ್ವೀಕರಿಸಿದ ಪಿಡಿಒ ಯಶವಂತ್, ಕ್ರಮದ ಭರವಸೆ ನೀಡಿದರು.
ಗ್ರಾಮಸ್ಥರಾದ ಸಣ್ಣಪೋತಪ್ಪ, ಟಿ.ಎನ್. ನಾಗರಾಜಪ್ಪ, ಎನ್. ರಾಜಣ್ಣ, ಮಂಜಣ್ಣ, ಸಿದ್ದೇಶ್, ಪಿ.ಟಿ. ನಾಗರಾಜ್, ಗೋವಿಂದರಾಜು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.