ತಳಕು (ಚಳ್ಳಕೆರೆ):ತಾಲ್ಲೂಕಿನ ತಳಕು ಗ್ರಾಮದ ಬಳಿ ಲಾರಿಯಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ₹ 6 ಲಕ್ಷ ಮೌಲ್ಯದ 20 ಟನ್ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಆಹಾರ ನಾಗರಿಕ ಸರಬರಾಜು ಇಲಾಖೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಬುಧವಾರ ವಶಪಡಿಸಿಕೊಂಡಿದ್ದಾರೆ.
ಲಾರಿಯಲ್ಲಿ ಬಳ್ಳಾರಿಯಿಂದ ತುಮಕೂರು ಕಡೆಗೆ ಅಕ್ಕಿ ಸಾಗಿಸುತ್ತಿದ್ದ ಸಂಬಂಧಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಅಧಿಕಾರಿಗಳುಚಾಲಕನನ್ನು ಬಂಧಿಸಿದ್ದಾರೆ ಎಂದು ತಹಶೀಲ್ದಾರ್ ಎನ್. ರಘುಮೂರ್ತಿ ತಿಳಿಸಿದ್ದಾರೆ. ಆಹಾರ ನಿರೀಕ್ಷಕ ಶ್ರೀನಿವಾಸ್, ಕಂದಾಯ ಅಧಿಕಾರಿ ನಿಂಗೇಗೌಡ, ಪಿಎಸ್‍ಐ ತಿಮ್ಮಣ್ಣ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.