ADVERTISEMENT

ಧರ್ಮಪುರದ ವಿವಿಧೆಡೆ ಸ್ವಾತಂತ್ರ್ಯೋತ್ಸವ

​ಪ್ರಜಾವಾಣಿ ವಾರ್ತೆ
Published 15 ಆಗಸ್ಟ್ 2023, 13:44 IST
Last Updated 15 ಆಗಸ್ಟ್ 2023, 13:44 IST
ಧರ್ಮಪುರ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಹನುಮಂತರಾಯ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷೆ ಲಕ್ಷ್ಮಿದೇವಿ, ಗ್ರಾಮ ಪಂಚಾಯಿತಿ ಸದಸ್ಯರು, ಪಿಡಿಒ ಲಕ್ಷ್ಮಿಕಾಂತ್ ಇದ್ದರು
ಧರ್ಮಪುರ ಗ್ರಾಮ ಪಂಚಾಯಿತಿಯಲ್ಲಿ ಹಮ್ಮಿಕೊಂಡಿದ್ದ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಹನುಮಂತರಾಯ ಧ್ವಜಾರೋಹಣ ನೆರವೇರಿಸಿದರು. ಉಪಾಧ್ಯಕ್ಷೆ ಲಕ್ಷ್ಮಿದೇವಿ, ಗ್ರಾಮ ಪಂಚಾಯಿತಿ ಸದಸ್ಯರು, ಪಿಡಿಒ ಲಕ್ಷ್ಮಿಕಾಂತ್ ಇದ್ದರು   

ಧರ್ಮಪುರ: ಪಂಚಲಿಂಗೇಶ್ವರ ಪದವಿ ಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜಿನಲ್ಲಿ ಧರ್ಮಪುರ ವಿದ್ಯಾಸಂಸ್ಥೆಯ ಅಧ್ಯಕ್ಷ ಕೆ. ಪುಟ್ಟಸ್ವಾಮಿಗೌಡ ಧ್ವಜಾರೋಹಣ ನೆರವೇರಿಸಿದರು. ಕಾರ್ಯದರ್ಶಿ ರಾಜಕುಮಾರ್, ಖಜಾಂಚಿ ಎಚ್. ಜುಂಜಪ್ಪ, ಆಡಳಿತ ಮಂಡಳಿ ನಿರ್ದೇಶಕರು, ಕಾಲೇಜು ಸಿಬ್ಬಂದಿ ಇದ್ದರು.

ಸ್ವಾಭಿಮಾನ್ ವಸತಿ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನಲ್ಲಿ ಪ್ರಾಂಶುಪಾಲ ಜಿ. ರಂಗಸ್ವಾಮಿ ಧ್ವಜಾರೋಹಣ ನೆರವೇರಿಸಿದರು. ಧರ್ಮಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ ಹನುಮಂತರಾಯ, ಉಪಾಧ್ಯಕ್ಷೆ ಲಕ್ಷ್ಮೀದೇವಿ ನರಸಿಂಹಮೂರ್ತಿ, ಮಹಾಂತೇಶ್ ಉಪಸ್ಥಿತರಿದ್ದರು.

ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯಾಧಿಕಾರಿ ಡಾ.ಭಾಸ್ಕರ್ ಬಾಬು ಧ್ವಜಾರೋಹಣ ನೆರವೇರಿಸಿದರು. ಆಸ್ಪತ್ರೆ ಸಿಬ್ಬಂದಿ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.

ADVERTISEMENT

ದರ್ಶನ್ ಐಟಿಐ ಕಾಲೇಜಿನಲ್ಲಿ ವಿದ್ಯಾಸಂಸ್ಥೆಯ ಅಧ್ಯಕ್ಷರಾದ ಲಲಿತಾ ಕೃಷ್ಣಮೂರ್ತಿ ಧ್ವಜಾರೋಹಣ ನೆರವೇರಿಸಿದರು. ಪ್ರಾಂಶುಪಾಲ ಷರೀಫ್‌ ಖಾನ್, ಪುಷ್ಪಾ, ರಂಗಪ್ಪ, ಚೇತನಾ, ತಿಪ್ಪೇಸ್ವಾಮಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.