ADVERTISEMENT

‘ಬಂಜಾರ ಸಮುದಾಯಕ್ಕೆ ಮಲತಾಯಿ ಧೋರಣೆ’

ಬಂಜಾರ ವಿದ್ಯಾರ್ಥಿ ಯುವ ಘಟಕದ ಅಧ್ಯಕ್ಷ ಗಿರೀಶ್

​ಪ್ರಜಾವಾಣಿ ವಾರ್ತೆ
Published 25 ಅಕ್ಟೋಬರ್ 2021, 6:51 IST
Last Updated 25 ಅಕ್ಟೋಬರ್ 2021, 6:51 IST
ಚಿತ್ರದುರ್ಗ ತಾಲ್ಲೂಕಿನ ಸೀಬಾರ ಸಮೀಪದ ಬಂಜಾರ ಗುರುಪೀಠದಲ್ಲಿ ಈಚೆಗೆ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಸರ್ದಾರ್ ಸೇವಾಲಾಲ್ ಸ್ವಾಮೀಜಿ ಉದ್ಘಾಟಿಸಿದರು.
ಚಿತ್ರದುರ್ಗ ತಾಲ್ಲೂಕಿನ ಸೀಬಾರ ಸಮೀಪದ ಬಂಜಾರ ಗುರುಪೀಠದಲ್ಲಿ ಈಚೆಗೆ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಸರ್ದಾರ್ ಸೇವಾಲಾಲ್ ಸ್ವಾಮೀಜಿ ಉದ್ಘಾಟಿಸಿದರು.   

ಸೀಬಾರ (ಚಿತ್ರದುರ್ಗ): ರಾಜ್ಯದಲ್ಲಿ ಅಂದಾಜು 40 ಲಕ್ಷ ಬಂಜಾರ ಸಮುದಾಯದವರಿದ್ದಾರೆ. 3,500ಕ್ಕೂ ಹೆಚ್ಚು ತಾಂಡಾಗಳಿವೆ. ಈ ಸಮುದಾಯದ ಬಗ್ಗೆ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಬಂಜಾರ ವಿದ್ಯಾರ್ಥಿ ಯುವ ಘಟಕದ ಅಧ್ಯಕ್ಷ ಗಿರೀಶ್ ಆರೋಪಿಸಿದರು.

ತಾಲ್ಲೂಕಿನ ಸೀಬಾರ ಸಮೀಪದ ಸೇವಾಲಾಲ್ ಸಂಸ್ಥಾನ ಬಂಜಾರ ಗುರುಪೀಠದಲ್ಲಿ ಈಚೆಗೆ ನಡೆದ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

‘ತಾಂಡಾಗಳಲ್ಲಿ ಮತಾಂತರ ನಡೆಯುತ್ತಿದೆ. ಮೂಢನಂಬಿಕೆಗಳಿಂದ ಜನಾಂಗ ಇನ್ನೂ ಹೊರಬಂದಿಲ್ಲ. ಎ.ಜೆ. ಸದಾಶಿವ ಆಯೋಗದ ವರದಿಯನ್ನು ಮುಂದಿಟ್ಟುಕೊಂಡು ಸಹೋದರ ಸಮಾಜಗಳು ಆರೋಪ ಮಾಡುತ್ತಿವೆ. ತಾಂಡಾ, ಹಾಡಿ, ಹಟ್ಟಿಗಳು ಇನ್ನು ಕಂದಾಯ ಗ್ರಾಮಗಳಾಗಿಲ್ಲ. ಸರ್ಕಾರ ವಿಶೇಷ ಮುತುವರ್ಜಿ ವಹಿಸಿ ಲಂಬಾಣಿ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನಾಗಿ ಮಾಡಬೇಕು’ ಎಂದರು.

ADVERTISEMENT

ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಕರ್ನಾಟಕ ಬಂಜಾರ ರಕ್ಷಣಾ ವೇದಿಕೆ ಅಧ್ಯಕ್ಷ ಕೆ.ಡಿ. ನಾಯ್ಕ, ಯುವ ಘಟಕದ ಅಧ್ಯಕ್ಷ ಶಿವಾನಾಯ್ಕ, ಶಿಕ್ಷಕ ಎಲ್. ರೆಡ್ಡಿನಾಯ್ಕ, ಐಯ್ಯನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ದೇವರಾಜ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.