ADVERTISEMENT

ಜನಾಕ್ರೋಶ ಯಾತ್ರೆ ಮುಂದೂಡಿಕೆ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2025, 16:01 IST
Last Updated 23 ಏಪ್ರಿಲ್ 2025, 16:01 IST

ಚಿತ್ರದುರ್ಗ: ಜಮ್ಮು–ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿ ಪ್ರವಾಸಿಗರನ್ನು ಹತ್ಯೆ ಮಾಡಿರುವ ಕಾರಣ ಬಿಜೆಪಿ ಏ. 25ರಂದು ನಗರದಲ್ಲಿ ಆಯೋಜಿಸಿದ್ದ ಜನಾಕ್ರೋಶ ಯಾತ್ರೆಯನ್ನು ಮುಂದೂಡಲಾಗಿದೆ.

‘ಕರ್ನಾಟಕದ ಮೂವರು ಸೇರಿ 28 ಮಂದಿ ಘಟನೆಯಲ್ಲಿ ಜೀವ ಕಳೆದುಕೊಂಡಿದ್ದಾರೆ. ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವ ಕಾರಣಕ್ಕಾಗಿ ಜನಕ್ರೋಶ ಯಾತ್ರೆಯನ್ನು ಮುಂದೂಡಲಾಗಿದೆ. ರಾಜ್ಯ ಸರ್ಕಾರದ ವಿರುದ್ಧ ಈಗಾಗಲೇ ಬಿಜೆಪಿ ಮುಖಂಡರು 2 ಹಂತದ ಜನಾಕ್ರೋಶ ಯಾತ್ರೆ ನಡೆಸಿದ್ದಾರೆ. 3ನೇ ಹಂತದ ಯಾತ್ರೆ ಏ. 25ರಂದು ನಡೆಯಬೇಕಿತ್ತು. ಭಯೋತ್ಪಾದನಾ ದಾಳಿಯ ಹಿನ್ನೆಲೆಯಲ್ಲಿ ಯಾತ್ರೆಯನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು ಶೀಘ್ರ ಪ್ರಕಟಿಸಲಾಗುವುದು’ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಎ.ಮುರಳಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT