ADVERTISEMENT

ಬಸವಕಲ್ಯಾಣದಿಂದ ಜಾಥಾ

ಸಮಾಜವಾದಿ ಪಾರ್ಟಿಯ ಮಂಜಪ್ಪ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2022, 4:52 IST
Last Updated 5 ಡಿಸೆಂಬರ್ 2022, 4:52 IST
ಎನ್.ಮಂಜಪ್ಪ
ಎನ್.ಮಂಜಪ್ಪ   

ಚಿತ್ರದುರ್ಗ: ಕೇಂದ್ರ ಮತ್ತು ರಾಜ್ಯ ಸರ್ಕಾರದ ದುರಾಡಳಿತ ವಿರೋಧಿಸಿ ಡಿಸೆಂಬರ್‌ ಅಂತ್ಯದಲ್ಲಿ ಬಸವಕಲ್ಯಾಣದಿಂದ ಬೆಂಗಳೂರಿನವರೆಗೆ 750 ಕಿ.ಮೀ. ಸೈಕಲ್‌ ಜಾಥಾ ನಡೆಸಲಾಗುವುದು ಎಂದು ಸಮಾಜವಾದಿ ಪಾರ್ಟಿ ರಾಜ್ಯ ಘಟಕದ ಅಧ್ಯಕ್ಷ ಎನ್‌.ಮಂಜಪ್ಪ ತಿಳಿಸಿದರು.

‘ಕೇಂದ್ರ ಮತ್ತು ರಾಜ್ಯ ಸರ್ಕಾರದ ಭ್ರಷ್ಟ ಆಡಳಿತಕ್ಕೆ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಾಥಾ ಚಿತ್ರದುರ್ಗ, ತುಮಕೂರು, ಬೆಂಗಳೂರು, ರಾಯಚೂರು, ಕಲಬುರಗಿಯಲ್ಲಿ ಸಂಚರಿಸಲಿದೆ’ ಎಂದುಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

‘ಮುಂಬರುವ ವಿಧಾನಸಭಾ ಚುನಾವಣೆಯ ದೃಷ್ಟಿಯಿಂದ ರಾಜ್ಯದಲ್ಲಿ ನಾಲ್ಕು ಕಡೆ ಸಮಾವೇಶ ನಡೆಸಲಾಗುತ್ತದೆ. ಜನವರಿ, ಫೆಬ್ರುವರಿಯಲ್ಲಿ ಚಿತ್ರದುರ್ಗದಲ್ಲಿ ಮೊದಲ ಸಮಾವೇಶ ನಡೆಯಲಿದೆ. ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್‌ ಯಾದವ್‌ ಹಾಗೂ ಪಕ್ಷದ ರಾಷ್ಟ್ರೀಯ ನಾಯಕರು ಭಾಗವಹಿಸುವರು’ ಎಂದು ತಿಳಿಸಿದರು.

ADVERTISEMENT

‘ರಾಜ್ಯದ ಎಲ್ಲ ಜಿಲ್ಲಾ ಸಮಿತಿಗಳನ್ನು ಡಿ.15ರೊಳಗೆ ನೇಮಕ ಮಾಡಿ ಆದೇಶಿಸಲಾಗುವುದು. ಪಕ್ಷದ ಸದಸ್ಯತ್ವ ಅಭಿಯಾನ ಅತ್ಯಂತ ಬಿರುಸಾಗಿ ನಡೆಯುತ್ತಿದೆ. ರಾಜ್ಯದಲ್ಲೇ 39 ಕ್ಷೇತ್ರಗಳನ್ನು ಗುರುತಿಸಿದ್ದು ಇಲ್ಲಿ ಪಕ್ಷದ ಅಭ್ಯರ್ಥಿಗಳು ಕಣಕ್ಕಿಳಿಯಲಿದ್ದಾರೆ’ ಎಂದು ತಿಳಿಸಿದರು.

ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌, ರಾಜ್ಯ ಸಮಿತಿ ಸದಸ್ಯ ಎಚ್‌.ಎನ್‌.ಜಗದೀಶ್‌, ಎನ್‌.ಧನಕೋಟಿ, ಜಿ.ಎನ್‌.ಯಶೋಧರ, ಎನ್‌.ಸುರೇಶ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.